ಸಾರಾಂಶ
ಕೊರಟಗೆರೆ: ಎರಡು ಚಿರತೆಗಳ ಕಾದಾಟಕ್ಕೆ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಕೊರಟಗೆರೆ: ಎರಡು ಚಿರತೆಗಳ ಕಾದಾಟಕ್ಕೆ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ತಾಲೂಕಿನ ಕಸಬಾ ಹೋಬಳಿಯ ವಡ್ಡಗೆರೆ ಗ್ರಾಪಂ ವ್ಯಾಪ್ತಿಯ ಚೀಲಗಾನಹಳ್ಳಿಯಿಂದ ಯಾದಗೆರೆಗೆ ಹೋಗುವ ಹಳ್ಳದ ಸಮೀಪದಲ್ಲಿ ಎರಡು ಚಿರತೆಗಳು ಕಾದಾಟ ಆಡಿ ಎರಡು ವರ್ಷದ ಗಂಡು ಚಿರತೆಯ ಬಾಯಲ್ಲಿ ತೀರ್ವ ರಕ್ತಸ್ರಾವದಿಂದ ನರಳಾಡುತ್ತಿದ್ದ ಚಿರತೆಯನ್ನು ಕಂಡು ಸಾರ್ವಜನಿಕರು ಅರಣ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಚಿರತೆಯ ಚಲನವಲನವನ್ನು ಪರೀಕ್ಷಿಸಿದಾಗ ಚಿರತೆ ಮೃತಪಟ್ಟಿರುವುದು ದೃಢವಾಗಿದೆ. ಮೃತ ಚಿರತೆಯನ್ನು ಮರಣೋತ್ತರ ಪರೀಕ್ಷೆ ಮಾಡಿ ಮೇಲಾಧಿಕಾರಿಗಳ ಆದೇಶದಂತೆ ಅಗತ್ಯ ಕ್ರಮವಹಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಅರಣ್ಯ ಅಧಿಕಾರಿಗಳು ಹಾಜರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))