ಸಾರಾಂಶ
ತಕ್ಷಣ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಡ್ಯ: ಅತಿ ವೇಗ ಹಾಗೂ ಅಜಾಗರೂಕತೆಯಿಂದ ದ್ವಿಚಕ್ರ ವಾಹನ ಹೆದ್ದಾರಿ ಬದಿಯ ಸ್ಕೈವಾಕ್ ಕಂಬಕ್ಕೆ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಹಿಳಾ ಸರ್ಕಾರಿ ಕಾಲೇಜಿನ ಬಳಿ ಶುಕ್ರವಾರ ಮುಂಜಾನೆ ನಡೆದಿದೆ. ನಗರದ ಉದಯಗಿರಿ ಬಡಾವಣೆಯ ಡ್ಯಾನಿಯಲ್ (23) ಹಾಗೂ ಜೇಸು ಅಲೆಕ್ಸ್ (20) ಅಪಘಾತದಲ್ಲಿ ಮೃತಪಟ್ಟವರು. ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಬುಲೆಟ್‌ನಲ್ಲಿ ಹೋಗುತ್ತಿದ್ದ ವೇಳೆ ಸ್ಕೈವಾಕ್‌ನ ಕಬ್ಬಿಣದ ಕಂಬಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಿಮ್ಸ್‌ನ ಶವಾಗಾರದಲ್ಲಿ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.