ಮಧ್ಯಾಹ್ನದ ಸುಡು ಬಿಸಿಲಿನ ತಾಪ ತಾಳಲಾಗದೆ ಗ್ರಾಮದ ಹೊರವಲಯದಲ್ಲಿನ ಕೆರೆಯಲ್ಲಿ ಈಜಾಡಲು ಹೋಗಿದ್ದಾರೆ. ಕೆರೆಯಲ್ಲಿನ ಆಳವನ್ನು ಅಂದಾಜಿಸಲಾಗದೆ ಊಳಿನಲ್ಲಿ ಸಿಲುಕಿಕೊಂಡ ಇಬ್ಬರು ಯುವಕರು ನೀರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಶ್ರೀನಿವಾಸಪುರ: ಕೆರೆಯಲ್ಲಿ ಈಜಾಡಲು ಹೋದ ಇಬ್ಬರು ಯುವಕರು ನೀರಿನ ಊಳಿನಲ್ಲಿ ಸಿಲುಕಿ ಕೊಂಡು ಹೊರಬರಲಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಲಕ್ಷ್ಮೀಪುರ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಪಚ್ಚರಮಾಕಲಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಮೃತರನ್ನು ರೂಣೂರು ಹೋಬಳಿಯ ಚಾಂಪಲ್ಲಿ ಗಾರೆ ಕೆಲಸ ಮಾಡುತ್ತಿದ್ದ ನರೇಂದ್ರ(೨೫) ಹಾಗೂ ಚಂದನ್ (೨೫) ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ಸುಡು ಬಿಸಿಲಿನ ತಾಪ ತಾಳಲಾಗದೆ ಗ್ರಾಮದ ಹೊರವಲಯದಲ್ಲಿನ ಕೆರೆಯಲ್ಲಿ ಈಜಾಡಲು ಹೋಗಿದ್ದಾರೆ. ಕೆರೆಯಲ್ಲಿನ ಆಳವನ್ನು ಅಂದಾಜಿಸಲಾಗದೆ ಊಳಿನಲ್ಲಿ ಸಿಲುಕಿಕೊಂಡ ಇಬ್ಬರು ಯುವಕರು ನೀರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ತಾಲೂಕಿನ ರಾಯಲ್ಪಾಡು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.