ಜಾಗತಿಕ ಸಾಹಿತ್ಯ ಮತ್ತು ತತ್ವಶಾಸ್ತ್ರವನ್ನು ಆಳವಾಗಿ ಅಧ್ಯಯನ ಮಾಡಿದ ಅನಂತಮೂರ್ತಿ ಅವರು ಜಾಗತಿಕ ಮನ್ನಣೆಗೆ ಒಳಗಾಗುವ ಕೃತಿಗಳನ್ನು ರಚಿಸಿ, ಕನ್ನಡ ಭಾಷೆಯನ್ನು ವಿಶ್ವಮಾನ್ಯಗೊಳಿಸಿದ ವಿಶ್ವ ಮಾನ್ಯ ಲೇಖಕ ಎಂದು ರಾಜಶೇಖರ ಹಳೆಮನೆ ಹೇಳಿದರು.
ಮಂಗಳೂರು: ಜಾಗತಿಕ ಸಾಹಿತ್ಯ ಮತ್ತು ತತ್ವಶಾಸ್ತ್ರವನ್ನು ಆಳವಾಗಿ ಅಧ್ಯಯನ ಮಾಡಿದ ಅನಂತಮೂರ್ತಿ ಅವರು ಜಾಗತಿಕ ಮನ್ನಣೆಗೆ ಒಳಗಾಗುವ ಕೃತಿಗಳನ್ನು ರಚಿಸಿ, ಕನ್ನಡ ಭಾಷೆಯನ್ನು ವಿಶ್ವಮಾನ್ಯಗೊಳಿಸಿದ ವಿಶ್ವ ಮಾನ್ಯ ಲೇಖಕ ಎಂದು ರಾಜಶೇಖರ ಹಳೆಮನೆ ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹಾಗೂ ಲೀಲಾವತಿ ಶೆಟ್ಟಿ ಶಿಕ್ಷಣ ಕಾಲೇಜು ಮಂಗಳೂರು ಸಹಯೋಗದಲ್ಲಿ ನಡೆದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಯು.ಆರ್.ಅನಂತಮೂರ್ತಿ ಅವರ ಕವಿ-ಕಾವ್ಯ-ಸಾಹಿತ್ಯ ಪರಂಪರೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಡಾ.ಎಂ.ವಿ.ಶೆಟ್ಟಿ ಶಿಕ್ಷಣ ಸಮೂಹ ಸಂಸ್ಥೆಯ ಅಕಾಡೆಮಿ ಅಸೋಸಿಯೇಟ್ ಡಾ.ಪ್ರಕಾಶ್ ಅಮೀನ್ ಉದ್ಘಾಟಿಸಿ ಮಾತನಾಡಿ, ಸಾಹಿತ್ಯ ಅಧ್ಯಯನದಿಂದ, ದೊಡ್ಡ ಲೇಖಕರ ಬಗ್ಗೆ ತಿಳಿದುಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸಂಸ್ಕಾರ ಬೆಳೆಯುತ್ತದೆ ಎಂದರು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ನಾಲ್ಕುವರೆ ವರ್ಷಗಳಲ್ಲಿ ಸಾಹಿತ್ಯವನ್ನು ಜನ ಸಾಮಾನ್ಯರಿಗೆ ತಲುಪುವಂತೆ ಮಾಡಲು ಪ್ರಯತ್ನಿಸಿದ್ದೇವೆ. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗಾಗಿ ಹೆಚ್ಚು ಕಾರ್ಯಕ್ರಮ ಸಾಹಿತ್ಯ ಪರಿಷತ್ತಿನಿಂದ ಮಾಡಲಾಗಿದೆ. ಈ ಕಾರ್ಯಕ್ರಮಗಳಿಂದ ಅನೇಕ ವಿದ್ಯಾರ್ಥಿಗಳು ಸಾಹಿತ್ಯ ಅಭಿರುಚಿಯನ್ನು ಬಳಸಿಕೊಂಡಿದ್ದಾರೆ ಮತ್ತು ಸಾಹಿತ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಡಾ.ಮಾಲತಿ ಆರ್. ಭಾವಿಮನೆ ಪ್ರಾಸ್ತಾವಿಕ ಮಾತನಾಡಿದರು.ಉಪನ್ಯಾಸಕಿ ಶೋಭಿತ ಸ್ವಾಗತಿಸಿದರು. ಸಮಿತ ವಂದಿಸಿದರು. ಕಾವ್ಯ ನಿರೂಪಿಸಿದರು.