ಉಚ್ಚಿಲ ದಸರಾ 2024 ಆಮಂತ್ರಣ ಪತ್ರಿಕೆ ಬಿಡುಗಡೆ

| Published : Aug 28 2024, 12:48 AM IST

ಉಚ್ಚಿಲ ದಸರಾ 2024 ಆಮಂತ್ರಣ ಪತ್ರಿಕೆ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ‘ಉಚ್ಚಿಲ ದಸರಾ -2024’ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯಿತು. ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ‘ಉಚ್ಚಿಲ ದಸರಾ -2024’ರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಮಂಗಳವಾರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೊಗವೀರ ಸಮಾಜದ ನಾಯಕ ನಾಡೋಜ ಡಾ. ಜಿ. ಶಂಕರ್ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಡಾ.ಜಿ.ಶಂಕರ್, ಈ ಬಾರಿ ಉಚ್ಚಿಲ ದಸರಾ ಅ.3ರಿಂದ 12ರ ವರೆಗೆ ನಡೆಯಲಿದ್ದು, ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ನೃತ್ಯ ವೈವಿಧ್ಯ , ದೇಹದಾರ್ಢ್ಯ ಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ಸಾಮೂಹಿಕ ದಾಂಡಿಯ ನೃತ್ಯ ಇತ್ಯಾದಿ ವಿಶೇಷಗಳು ಇರಲಿವೆ ಎಂದರು.

ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿ, ಸರ್ವರ ಸಹಕಾರದಿಂದ ಉಚ್ಚಿಲ ದಸರಾ -೨೦೨೪ ಆಚರಿಸಲಾಗುತ್ತಿದೆ. ತನು, ಮನ, ಧನದಿಂದ ಎಲ್ಲರೂ ಸಹಕರಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದರು.

ಉಪಾಧ್ಯಕ್ಷ ಮೋಹನ್ ಬೇಂಗ್ರೆ, ಪ್ರಧಾನ ಕಾರ್ಯದರ್ಶಿ ಶರಣ್ ಕುಮಾರ್ ಮಟ್ಟು, ಜೊತೆ ಕಾರ್ಯದರ್ಶಿ ಸುಜಿತ್ ಸಾಲ್ಯಾನ್ ಮುಲ್ಕಿ, ಕೋಶಾಧಿಕಾರಿ ರತ್ನಾಕರ ಸಾಲ್ಯಾನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಗಿರಿಧರ ಸುವರ್ಣ ಮೂಳೂರು, ಕಾರ್ಯದರ್ಶಿ ನಾರಾಯಣ ಸಿ ಕರ್ಕೇರ, ಕೋಶಾಧಿಕಾರಿ ಸುಧಾಕರ್ ಕುಂದರ್, ಬೆಣ್ಣೆಕುದ್ರು ಕ್ಷೇತ್ರದ ಅಧ್ಯಕ್ಷ ಆನಂದ ಸಿ. ಕುಂದರ್, ಮೊಗವೀರ ಮಹಾಜನ ಸಂಘದ ಮಹಿಳಾ ಮಂಡಳಿಯ ಅಧ್ಯಕ್ಷೆ ಉಷಾರಾಣಿ ಬೋಳೂರು, ಪ್ರಧಾನ ಕಾರ್ಯದರ್ಶಿ ಉಷಾ ಲೋಕೇಶ್, ಕಾಪು ನಾಲ್ಕುಪಟ್ಣ ಮೊಗವೀರ ಸಭಾ ಅಧ್ಯಕ್ಷ ಮನೋಜ್ ಪಿ. ಕಾಂಚನ್, ಮಹಿಳಾ ಸಭಾದ ಅಧ್ಯಕ್ಷೆ ಸುಗುಣ ಎಸ್ ಕರ್ಕೇರ, ದ.ಕ ಮೊಗವೀರ ಮಹಾಜನ ಸಂಘ ಉಚ್ಚಿಲ ಆಡಳಿತ ಮಂಡಳಿ ಸದಸ್ಯರಾದ ವಾಸುದೇವ ಸಾಲ್ಯಾನ್ ಕಟಪಾಡಿ, ಗುಂಡು ಬಿ ಅಮೀನ್ ಕಿದಿಯೂರು, ಸತೀಶ್ ಎಸ್ ಅಮೀನ್ ಬೆಣ್ಣೆ ಕುದ್ರು, ದೇವಳದ ಪ್ರಧಾನ ಪ್ರಬಂಧಕ ಸತೀಷ್‌ ಅಮೀನ್‌ ಪಡುಕರೆ ಮತ್ತಿತರರಿದ್ದರು.