ಉಚ್ಚಿಲ - ಉಡುಪಿ ದಸರಾದ ದೀಪಾಲಂಕಾರ ಉದ್ಘಾಟನೆ

| Published : Sep 22 2025, 01:02 AM IST

ಉಚ್ಚಿಲ - ಉಡುಪಿ ದಸರಾದ ದೀಪಾಲಂಕಾರ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ದೇವಸ್ಥಾನದ ರಥಬೀದಿ, ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿ ವರೆಗೆ, ಕೊಪ್ಪಲಂಗಡಿಯಿಂದ ಕಾಪು ಬೀಚ್‌ ವರೆಗೆ ರಸ್ತೆಯುದ್ದಕ್ಕೂ ಭವ್ಯವಾದ ಈ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದೆ.

ಕನ್ನಡಪ್ರಭ ವಾರ್ತೆ ಉಚ್ಚಿಲ

ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಇಂದಿನಿಂದ ಅ.2ರ ವರೆಗೆ ಜರುಗಲಿರುವ ಉಡುಪಿ- ಉಚ್ಚಿಲ ದಸರಾ 2025ರ ನಗರಾಲಂಕಾರ - ವೈವಿಧ್ಯಮಯ ವಿದ್ಯುತ್ ದೀಪಾಲಂಕಾರವನ್ನು ಭಾನುವಾರ ಸಂಜೆ ಉಡುಪಿ ಉಚ್ಚಿಲ ದಸರಾ ರುವಾರಿ ಡಾ. ಜಿ.ಶಂಕರ್ ಉದ್ಘಾಟಿಸಿದರು.ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನ, ದೇವಸ್ಥಾನದ ರಥಬೀದಿ, ದಸರಾ ಮಂಟಪ ಹಾಗೂ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಿಂದ ಪಡುಬಿದ್ರಿ ವರೆಗೆ, ಕೊಪ್ಪಲಂಗಡಿಯಿಂದ ಕಾಪು ಬೀಚ್‌ ವರೆಗೆ ರಸ್ತೆಯುದ್ದಕ್ಕೂ ಭವ್ಯವಾದ ಈ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿದೆ.ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದ.ಕ. ಮೊಗವೀರ ಮಹಾಜನ ಸಂಘ ಅಧ್ಯಕ್ಷ ಜಯ ಸಿ. ಸುವರ್ಣ, ಉಪಾಧ್ಯಕ್ಷರಾದ ಮೋಹನ್ ಬೇಂಗ್ರೆ, ದಿನೇಶ್‌ ಎರ್ಮಾಳು, ಕಾರ್ಯದರ್ಶಿ ಶರಣ್‌ಕುಮಾರ್‌ ಮಟ್ಟು, ಕ್ಷೇತ್ರಾಡಳಿಯ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ಉಚ್ಚಿಲ ದಸರಾ ಉತ್ಸವ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಮಹಿಳಾ ಸಂಚಾಲಕಿ ಸಂಧ್ಯಾದೀಪ ಸುನೀಲ್‌, ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಮತ್ತು ದೇವಳದ ಪ್ರಧಾನ ವ್ಯವಸ್ಥಾಪಕ ಸತೀಷ್‌ ಅಮೀನ್‌ ಪಡುಕರೆ ಮತ್ತಿತರರು ಉಪಸ್ಥಿತರಿದ್ದರು.