ಸಾರಾಂಶ
ದೊಡ್ಡಣಗುಡ್ಡೆಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಹಯೋಗದಲ್ಲಿ 2000ನೇ ಮದ್ಯವರ್ಜನ ಶಿಬಿರ ಗುರುವಾರ ಆರಂಭವಾಯಿತು.
ಉಡುಪಿ: ಇಲ್ಲಿನ ದೊಡ್ಡಣಗುಡ್ಡೆಯ ಡಾ.ಎ.ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಮಲ್ ಎ. ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಹಾಗೂ ಉಡುಪಿ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಹಯೋಗದಲ್ಲಿ 2000ನೇ ಮದ್ಯವರ್ಜನ ಶಿಬಿರ ಗುರುವಾರ ಆರಂಭವಾಯಿತು.
ಶಿಬಿರವನ್ನು ಕರ್ನಾಟಕ ಮನೋ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ಅನಿಲ್ ಕುಮಾರ್ ಎಂ. ಎನ್. ಉದ್ಘಾಟಿಸಿ ಶುಭ ಹಾರೈಸಿದರು.ಮುಖ್ಯ ಅತಿಥಿಗಳಾಗಿ ಡಾ. ಎ.ವಿ ಬಾಳಿಗ ಸಮೂಹ ಸಂಸ್ಥೆಗಳ ನಿರ್ದೇಶಕ ಡಾ ಪಿ.ವಿ ಭಂಡಾರಿ, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷಶ್ರ ಡಾ. ಅಶೋಕ್ ಕುಮಾರ್, ಭಾರತೀಯ ಜೈನವ್ ಮಿಲನ್ ಅಧ್ಯಕ್ಷ ಪ್ರಸನ್ನ ಕುಮಾರ್, ಎಸ್‌ಕೆಡಿಆರ್‌ಡಿಪಿ ನಿರ್ದೇಶಕ ನಾಗರಾಜ್ ಶೆಟ್ಟಿ, ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಕಲ್ಮಾಡಿ, ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನೀರೆ ಕೃಷ್ಣಶೆಟ್ಟಿ, ತಾಲೂಕು ಅಧ್ಯಕ್ಷ ಸತ್ಯಾನಂದ ನಾಯಕ್, ವೇದಿಕೆ ಸದಸ್ಯ ಮಹಾಬಲ ಶೆಟ್ಟಿ ಉಪಸ್ಥಿತರಿದ್ದರು.
2000ನೇ ಶಿಬಿರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶಂಕರ್ ಕುಲಾಲ್ ಪೆರಂಪಳ್ಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಡುಪಿ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಸುರೇಂದ್ರ ನಾಯಕ್ ಸ್ವಾಗತಿಸಿದರು. ಮೇಲ್ವಿಚಾರಕ ಬಾಲಚಂದ್ರ ನಿರೂಪಿಸಿದರು. ಜನಜಾಗೃತಿ ಮೇಲ್ವಿಚಾರಕ ನಿತೇಶ್ ವಂದಿಸಿದರು.;Resize=(128,128))
;Resize=(128,128))
;Resize=(128,128))