ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ

| Published : Dec 12 2023, 12:45 AM IST

ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ 24ನೇ ಶಿಷ್ಯೋಪನಯನ
Share this Article
  • FB
  • TW
  • Linkdin
  • Email

ಸಾರಾಂಶ

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮ೦ಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ ೨೫ನೇ ಶಿಷ್ಯೋಪನಯನ ಸಮಾರಂಭವು ಸೋಮವಾರ ನೆರವೇರಿತು.

ಪ್ರಾತಃಕಾಲದಲ್ಲಿ ಧನ್ವಂತರಿ ಹೋಮ, ಧನ್ವಂತರಿ ಪೂಜೆ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಮಮತಾ ಕೆ.ವಿ., ವಿದ್ಯಾರ್ಥಿಗಳಿಗೆ ಉತ್ತಮ ಆಚಾರ ವಿಚಾರಗಳನ್ನು ಮೈಗೂಡಿಸಿಕೊಂಡು ಸಮಾಜಮುಖಿಗಳಾಗಿ ವೈದ್ಯ ವೃತ್ತಿಯನ್ನು ನಡೆಸುವಂತಾಗಲಿ ಹಾಗೂ ಹೊಸ ಆವಿಷ್ಕಾರಗಳ ಮೂಲಕ ಆಯುರ್ವೇದದ ಜ್ಞಾನವನ್ನು ಪ್ರಚುರ ಪಡಿಸುವಂತೆ ಕರೆ ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮೈಸೂರಿನ ಸರ್ಕಾರಿ ಆಯುರ್ವೇದ ಮಹಾವಿದ್ಯಾಲಯದ ನಿವೃತ್ತ ಪ್ರಾಂಶುಪಾಲ ಡಾ.ಸತ್ಯನಾರಾಯಣ ಭಟ್‌, ಅನಾರೋಗ್ಯಕರ ಜೀವನ ಶೈಲಿಯ ಪರಿಣಾಮಗಳನ್ನು ವಿವರಿಸಿ ಆಯುರ್ವೇದ ಜೀವನ ಶೈಲಿಯನ್ನು ಅಳವಡಿಸಿಕೊಳ್ಳುವಂತೆ ತಿಳಿಸಿದರು.

ಕಾಲೇಜಿನ ಸ್ನಾತಕ ವಿಭಾಗದ ಡೀನ್ ಡಾ.ರಜನೀಶ್ ವಿ. ಗಿರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗರಾಜ್ ಎಸ್‌. ಸ್ವಾಗತಿಸಿದರು. ಆಡಳಿತ ವಿಭಾಗ ಮುಖ್ಯಸ್ಥ ಡಾ.ವೀರಕುಮಾರ ಕೆ. ಸಂದೇಶ ವಾಚನ ಮಾಡಿದರು. ಶೈಕ್ಷಣಿಕ ವಿಭಾಗದ ಮುಖ್ಯಸ್ಥ ಡಾ. ಶ್ರೀಲತಾ ಕಾಮತ್‌ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ಬೋಧನೆಯನ್ನು ನೆರವೇರಿಸಿದರು. ಸ್ನಾತಕೋತ್ತರ ವಿಭಾಗದ ಡೀನ್ ಡಾ. ಅಶೋಕ್ ಕುಮಾರ್ ಬಿ.ಎನ್. ವಂದಿಸಿದರು. ಕೌಮಾರ ಭೃತ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಕಾವ್ಯ ಹಾಗೂ ಶರೀರ ರಚನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ರಶ್ಮಿ ಎನ್.ಆರ್. ಕಾರ್ಯಕ್ರಮ ನಿರೂಪಿಸಿದರು.