ಉಡುಪಿ: ವರ್ಷದೊಳಗೆ ಇಎಸ್‌ಐ ಆಸ್ಪತ್ರೆ ಆರಂಭಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ

| Published : Feb 06 2025, 11:47 PM IST

ಉಡುಪಿ: ವರ್ಷದೊಳಗೆ ಇಎಸ್‌ಐ ಆಸ್ಪತ್ರೆ ಆರಂಭಿಸುವಂತೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಜಿಲ್ಲೆಗೆ 2023ರಲ್ಲಿ ಮಂಜೂರಾಗಿರುವ ಕಾರ್ಮಿಕರ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಕಾಮಗಾರಿಯನ್ನು ಇನ್ನೂ ಆರಂಭಿದಿರುವುದನ್ನು ವಿರೋಧಿಸಿ, 2025ರೊಳ‍ಗೆ ಆಸ್ಪತ್ರೆಯನ್ನು ಸ್ಥಾಪಿಸಿ ಬಡ ಕಾರ್ಮಿಕರಿಗೆ ಆರೋಗ್ಯ ಸೌಲಭ್ಯವನ್ನು ಒದಗಿಸಬೇಕು ಎಂದು ಆಗ್ರಹಿಸಿ ದ ಕಾಮನ್ ಪೀಪಲ್ಸ್ ವೆಲ್ಫೇರ್ ಫೌಂಡೇಶನ್ ಅಧ್ಯಕ್ಷ ಜಿ.ಎ. ಕೋಟೆಯಾರ್ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಮಣಿಪಾಲ

ನಂತರ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ, ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಿಂದ ಮನವಿಯನ್ನು ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಈ ಮನವಿಯಲ್ಲಿ ಉಡುಪಿ ಜಿಲ್ಲೆಯ ಬಡ ಕಾರ್ಮಿಕರ ಆರೋಗ್ಯ ರಕ್ಷಣೆ - ಉಚಿತ ಚಿಕಿತ್ಸೆಗಾಗಿ 100 ಹಾಸಿಗೆಗಳ ಸೂಪರ್‌ ಸ್ಪೆಷಾಲಿಟಿ ಇಎಸ್‌ಐ ಆಸ್ಪತ್ರೆ 2023ರಲ್ಲಿಯೇ ಮಂಜೂರಾಗಿದೆ. ಅದಕ್ಕೆ ಅಗತ್ಯ ಅನುದಾನವನ್ನೂ ಬಿಡುಗಡೆ ಮಾಡಿ, 2025ರೊಳಗೆ ಎಲ್ಲ ಸೌಕರ್ಯಗಳ, ಅಗತ್ಯ ವೈದ್ಯರು ಮತ್ತು ಸಿಬ್ಬಂದಿಗಳುಳ್ಳ ಆಸ್ಪತ್ರೆಯನ್ನು ನಿರ್ಮಿಸಿ ಬಡವರಿಗೆ ಅಗತ್ಯ ಸೌಲಭ್ಯಗಳನ್ನು ನೀಡುವಂತೆ ಸೂಚಿಸಲಾಗಿದೆ.

ಆದರೆ ಆಸ್ಪತ್ರೆ ಮಂಜೂರಾಗಿ 2 ವರ್ಷಗಳೇ ಕಳೆದರೂ, ಕಾಮಗಾರಿ 2 ವರ್ಷಗಳಲ್ಲಿ ಪೂರ್ಣಗೊಳ್ಳಬೇಕಾಗಿದ್ದರೂ, ಕಾರ್ಮಿಕ ರಾಜ್ಯ ವಿಮಾ ನಿಗಮವು ಇನ್ನೂ ಆಸ್ಪತ್ರೆಯ ಕಾಮಗಾರಿಯನ್ನೇ ಆರಂಭಿಸಿಲ್ಲ. ಇದಕ್ಕೆ ಸ್ಥಳೀಯ ರಾಜಕೀಯ ನಾಯಕರ, ಖಾಸಗಿ ಆಸ್ಪತ್ರೆಗಳೇ ಕಾರಣ. ನಮ್ಮ ರಾಜಕೀಯ ನಾಯಕರು ಯಾವತ್ತೂ ಖಾಸಗಿ ಆಸ್ಪತ್ರೆಗಳನ್ನೇ ಬೆಂಬಲಿಸುತ್ತಿದ್ದಾರೆ ಮತ್ತು ಈ ಖಾಸಗಿ ಆಸ್ಪತ್ರೆಗಳು ಬಡವರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಲೂಟಿ ಮಾಡುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಇನ್ನೂ ಇಎಸ್‌ಐ ಆಸ್ಪತ್ರೆಯ ಕಾಮಗಾರಿ ಆರಂಭವಾಗಿಲ್ಲ ಎಂದು ಆರೋಪಿಸಲಾಗಿದೆ.ಪ್ರತಿಭಟನೆಯಲ್ಲಿ ದ ಕಾಮನ್ ಪೀಪಲ್ಸ್ ವೆಲ್ಫೇರ್ ಫೌಂಡೇಶನ್‌ನ ಮಹಿಳಾ ಘಟಕ ಅಧ್ಯಕ್ಷೆ ಭಾನುಮತಿ, ಯುವ ಘಟಕದ ಅಧ್ಯಕ್ಷ ಪ್ರವೀಣ್ ಕುಮಾರ್, ಪ್ರಮುಖರಾದ ನರಸಿಂಹಮೂರ್ತಿ ಮುಂತಾದವರಿದ್ದರು. ತುಳು ಸಂಘಟನೆಯ ಕಾರ್ಯಕರ್ತರು ಸತ್ಯಾಗ್ರಹಕ್ಕೆ ಬೆಂಬಲ ನೀಡಿದ್ದರು.