ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆ 2026–27ರಲ್ಲಿ ಮೂರು ವೈಯಕ್ತಿಕ ಪದಕಗಳನ್ನು ಗೆದ್ದು, ಸಮಗ್ರ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ರನ್ನರ್‌ ಅಪ್ ಸ್ಥಾನ ಪಡೆದಿದ್ದಾರೆ.

ಉಡುಪಿ: ನಗರದ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿಯರು ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆ 2026–27ರಲ್ಲಿ ಮೂರು ವೈಯಕ್ತಿಕ ಪದಕಗಳನ್ನು ಗೆದ್ದು, ಸಮಗ್ರ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ರನ್ನರ್‌ ಅಪ್ ಸ್ಥಾನ ಪಡೆದಿದ್ದಾರೆ. 65 ಕೆ.ಜಿ. ವಿಭಾಗದಲ್ಲಿ ಅದಿತಿ ಶೆಟ್ಟಿ ಪ್ರಥಮ ಸ್ಥಾನ ಗಳಿಸಿದರೆ, 68 ಕೆ.ಜಿ. ವಿಭಾಗದಲ್ಲಿ ದಿಶಾ ಡಿ. ಸಾಲ್ಯಾನ್ ದ್ವಿತೀಯ ಸ್ಥಾನ ಪಡೆದರು. 59 ಕೆ.ಜಿ. ವಿಭಾಗದಲ್ಲಿ ಮಾನೀಕ್ಷಾ ತೃತೀಯ ಸ್ಥಾನ ಗಳಿಸಿದರು.ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಸೆ. 23 ಮತ್ತು 24ರಂದು ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನಲ್ಲಿ ಸ್ಪರ್ಧೆ ನಡೆಯಿತು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಯತೀಶ್ ಕುಮಾರ್ ಹಾಗೂ ಕ್ರೀಡಾ ಇಂಟರ್ನ್ ಚಂದ್ರಿಕಾ ಕಾಂಬ್ಳೆ ಅವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ್ದರು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಯತೀಶ್ ಕುಮಾರ್ ಹಾಗೂ ಕ್ರೀಡಾ ಇಂಟರ್ನ್ ಚಂದ್ರಿಕಾ ಕಾಂಬ್ಳೆ ಅವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ್ದರು.