ಕಳೆದ ಹತ್ತು ದಿನಗಳಿಂದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಿದರೂ ಸ್ಪಂದಿಸದ ರಾಜ್ಯ ಸರ್ಕಾರ, ಇದೀಗ ರಾಜ್ಯ ಆರೋಗ್ಯ ಸಚಿವ ಯು. ಟಿ. ಖಾದರ್ ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ನಡೆಯುತ್ತದೆ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿ, ಆಶಾ ಕಾರ್ಯಕರ್ತೆಯರನ್ನು ಅವಮಾನಿಸಿದ್ದಾರೆ, ಇದು ರಾಜ್ಯ ಸರ್ಕಾರದ ಮನಸ್ಥಿತಿಯನ್ನು ಬಯಲು ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಕಳೆದ ಹತ್ತು ದಿನಗಳಿಂದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸಿದರೂ ಸ್ಪಂದಿಸದ ರಾಜ್ಯ ಸರ್ಕಾರ, ಇದೀಗ ರಾಜ್ಯ ಆರೋಗ್ಯ ಸಚಿವ ಯು. ಟಿ. ಖಾದರ್ ಆಶಾ ಕಾರ್ಯಕರ್ತೆಯರು ಇಲ್ಲದಿದ್ದರೂ ನಡೆಯುತ್ತದೆ ಎಂಬ ಬೇಜವಾಬ್ದಾರಿ ಹೇಳಿಕೆ ನೀಡಿ, ಆಶಾ ಕಾರ್ಯಕರ್ತೆಯರನ್ನು ಅವಮಾನಿಸಿದ್ದಾರೆ, ಇದು ರಾಜ್ಯ ಸರ್ಕಾರದ ಮನಸ್ಥಿತಿಯನ್ನು ಬಯಲು ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊರೋನಾ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಜನರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದ ಆಶಾ ಕಾರ್ಯಕರ್ತೆಯರ ಸೇವೆಯನ್ನು ಒಬ್ಬ ಆರೋಗ್ಯ ಸಚಿವನೇ ಅವಮಾನಿಸುತ್ತಿರುವುದು ಖಂಡನೀಯ ಎಂದವರು ಹೇಳಿದ್ದಾರೆ.

ಮೊನ್ನೆ ಮಂಡ್ಯದಲ್ಲಿ ಸಚಿವ ನರೇಂದ್ರ ಸ್ವಾಮಿ, ಆಶಾ ಕಾರ್ಯಕರ್ತೆಯರು ಕೇಳಿದಾಗಲೆಲ್ಲ ಕಂಠಿಹಾರ ನೀಡಲು ಸಾಧ್ಯವಿಲ್ಲ ಎಂದು ಹೇಳಿ ಅವರನ್ನು ಅಪಮಾನಿಸಿದ್ದರು. ಈಗ ಯು.ಟಿ. ಖಾದರ್ ಹೇಳಿಕೆ ನೀಡಿ, ವಿನಾಶ ಕಾಲಕ್ಕೆ ವಿಪರೀತ ಬುದ್ಧಿ ತೋರಿಸಿದ್ದಾರೆ. ಇಂತಹ ಬೇಜವಾಬ್ದಾರಿ ಹೇಳಿಕೆ ನೀಡಿದ ಸಚಿವ ಖಾದರ್ ತಕ್ಷಣ ಕ್ಷಮೆ ಯಾಚಿಸಬೇಕು ಎಂದು ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.