ಉಡುಪಿ: ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲಾಂಛನ ಅನಾವರಣ ಕಾರ್ಯಕ್ರಮ ಗುರುವಾರ ದೇವಸ್ಥಾನದ ಅವರಣದಲ್ಲಿ ನಡೆಯಿತು. ಲಾಂಛನವನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಅನಾವರಣಗೊಳಿಸಿ, ಲಕ್ಷಾಂತರ ಭಕ್ತಾಭಿಮಾನಿಗಳನ್ನು ಹೊಂದಿರುವ ಈ ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಸರ್ವಭಕ್ತರ ಸಹಕಾರದೊಂದಿಗೆ ಐತಿಹಾಸಿಕವಾಗಿ ನಡೆಯಲಿ ಎಂದು ಅವರು ಹಾರೈಸಿದರು. ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ. ಗಫೂರ್, ಮಾಜಿ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಅಜಯ್ ಪುರುಷೋತ್ತಮ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉದ್ಯಮಿ ನಾಗರಾಜ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್, ಪ್ರಧಾನ ತಂತ್ರಿ ಶಶಿಕಾಂತ್ ತಂತ್ರ, ಪ್ರಮುಖರಾದ ಪ್ರಭಾಕರ ಪೂಜಾರಿ, ಗೋಪಾಲ ಬಂಗೇರ, ವಾಣಿ ವಿ. ರಾವ್ ಉಪಸ್ಥಿತರಿದ್ದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ಕಾರ್ಯಕ್ರಮ ನಿರೂಪಿಸಿದರು.
ಉಡುಪಿ ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಲಾಂಛನ ಅನಾವರಣ
ಬನ್ನಂಜೆಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಲಾಂಛನ ಅನಾವರಣ ಕಾರ್ಯಕ್ರಮ ಗುರುವಾರ ದೇವಸ್ಥಾನದ ಅವರಣದಲ್ಲಿ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.