ಉಡುಪಿ: ವಿಶ್ವವೇ ಮೆಚ್ಚಿ ಆರಾಧಿಸುವಂತಹ ದಾರ್ಶನಿಕ, ಸಮಾಜ ಸುಧಾರಕ ಜಗಜ್ಯೋತಿ ಬಸವಣ್ಣನವರ ಆಚಾರ ಮತ್ತು ವಿಚಾರಗಳು ಸಾರ್ವಕಾಲಿಕವಾಗಿದೆ. ಸಾಮಾಜಿಕ ನ್ಯಾಯ ಮತ್ತು ಜಾತಿ ತಾರತಮ್ಯ ಮುಕ್ತ ಸಮ ಸಮಾಜದ ಸಂದೇಶಗಳನ್ನು ವಚನಗಳ ಮೂಲಕ ಸಾರಿದ ಬಸವಣ್ಣನವರ ತತ್ವಾದರ್ಶಗಳನ್ನು ಯುವಜನತೆಗೆ ತಿಳಿಸಲು ಉಡುಪಿಯಲ್ಲಿ ಬಸವಣ್ಣನವರ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗುತ್ತದೆ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದ್ದಾರೆ. ಅವರು ಜಿಲ್ಲಾಡಳಿತ ವತಿಯಿಂದ ನಗರದ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸೋಮವಾರ ನಡೆದ ವಿಶ್ವಗುರು ಬಸವಣ್ಣ ಜಯಂತಿ ಉದ್ಘಾಟಿಸಿ ಮಾತನಾಡಿದರು.ಇಂದು ಇಡೀ ವಿಶ್ವವೇ ಬಸವಣ್ಣನವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುತ್ತಿದೆ. 12ನೇ ಶತಮಾನದಲ್ಲೇ ತಮ್ಮ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಗೆ ತಂದು ಎಲ್ಲರೂ ಸಮಾನರು, ಮನುಜರೆಲ್ಲರೂ ಸದಾ ಕಾಯಕ ನಿರತರಾಗಿರಬೇಕು, ಅದುವೇ ಭಗವಂತನನ್ನು ಸೇರುವ ಮಾರ್ಗ ಎಂದು ಜಗತ್ತಿಗೆ ಸಾರಿದ ಬಸವಣ್ಣನವರ ತತ್ವವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಉಡುಪಿ ಬಸವ ಸಮಿತಿ ಗೌರವಾಧ್ಯಕ್ಷ ಡಾ.ಜಿ.ಎಸ್. ಚಂದ್ರಶೇಖರ್, ಅಧ್ಯಕ್ಷ ಗಂಗಾಧರ್ ಉಪಸ್ಥಿತರಿದ್ದರು. ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಾ.ನಿರಂಜನ ಯು.ಸಿ ಉಪನ್ಯಾಸ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು. ಆದರ್ಶ ಆಸ್ಪತ್ರೆಯ ಅನುಶ್ರೀ ನಿರೂಪಿಸಿದರು.
ಉಡುಪಿಯಲ್ಲಿ ಬಸವಣ್ಣ ಪುತ್ಥಳಿ ಸ್ಥಾಪನೆ: ಯಶ್‌ಪಾಲ್
ಲ್ಲಾಡಳಿತ ವತಿಯಿಂದ ನಗರದ ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಸೋಮವಾರ ನಡೆದ ವಿಶ್ವಗುರು ಬಸವಣ್ಣ ಜಯಂತಿ ಉದ್ಘಾಟಿಸಿ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.