ಉಡುಪಿ: ನಾಳೆ ಬೃಹತ್‌ ಉದ್ಯೋಗ ಮೇಳ-ಯಶ್ಪಾಲ್ ಸುವರ್ಣ

| Published : Sep 12 2025, 12:07 AM IST

ಸಾರಾಂಶ

ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಬೆಂಗಳೂರು ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಶನಿವಾರ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಉಡುಪಿ: ನಗರಸಭೆ ಮತ್ತು ಶ್ರೀ ಜ್ಞಾನ ಜ್ಯೋತಿ ಭಜನಾ ಮಂದಿರ ಸುವರ್ಣ ಸಂಭ್ರಮ ಸಮಿತಿ ಮಲ್ಪೆ ಇವರ ಆಶ್ರಯದಲ್ಲಿ ಯಶಸ್ ಮ್ಯಾನೇಜ್ಮೆಂಟ್ ಸೊಲ್ಯೂಷನ್ಸ್ ಬೆಂಗಳೂರು ಸಹಭಾಗಿತ್ವದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಶನಿವಾರ ಉಡುಪಿ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.ಈ ಉದ್ಯೋಗ ಮೇಳವನ್ನು ಅಂದು ಬೆಳಗ್ಗೆ 10 ಗಂಟೆಗೆ ನಾಡೋಜ ಡಾ. ಜಿ. ಶಂಕರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ವಹಿಸಲಿದ್ದು, ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಮಾಹೆ ಸಹಕುಲಾಧಿಪತಿ ಡಾ. ಡಾ. ಎಚ್. ಎಸ್. ಬಲ್ಲಾಳ್, ಆಸ್ಪೆನ್ ಪಡುಬಿದ್ರಿಯ ಹಿರಿಯ ಪ್ರಬಂಧಕ ಅಶೋಕ್ ಕುಮಾರ್ ಶೆಟ್ಟಿ, ಯೂನಿಯನ್ ಬ್ಯಾಂಕ್ ವಿಭಾಗೀಯ ಅಧಿಕಾರಿ ಅಶೋಕ್ ಭಾಂಡಗೆ, ಕೆನರಾ ಬ್ಯಾಂಕ್‌ ವೃತ್ತ ಕಚೇರಿ ಪ್ರಧಾನ ವ್ಯವಸ್ಥಾಪಕ ಎಚ್. ಕೆ. ಗಂಗಾಧರ್, ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಎಸ್ಪಿ ಹರಿರಾಮ್ ಶಂಕರ್, ಆತ್ಮಾನಂದ ಸರಸ್ವತಿ ಐಟಿಐ ಬಿಲ್ಲಾಡಿ ಪ್ರಾಂಶುಪಾಲ ರೂಪೇಶ್ ಕುಮಾರ್, ಜ್ಞಾನ ಜ್ಯೋತಿ ಭಜನಾ ಮಂದಿರದ ಗೌರವಾಧ್ಯಕ್ಷ ಪಾಂಡುರಂಗ ಮಲ್ಪೆ, ಅಧ್ಯಕ್ಷ ಜ್ಞಾನೇಶ್ವರ್ ಕೋಟ್ಯಾನ್‌, ಜ್ಞಾನ ಜ್ಯೋತಿ ಸುವರ್ಣ ಸಂಭ್ರಮ ಸಮಿತಿ ಅಧ್ಯಕ್ಷ ಹರಿಯಪ್ಪ ಕೋಟ್ಯಾನ್ ಭಾಗವಹಿಸಲಿದ್ದಾರೆ.ಉದ್ಯೋಗ ಮೇಳದಲ್ಲಿ 60 ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಲಿದ್ದು, ಸುಮಾರು 2 ಸಾವಿರ ಅಭ್ಯರ್ಥಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಯಶ್ ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.