ಈಶ್ವರನಗರದಲ್ಲಿ ಉಡುಪಿ ಬಿಜೆಪಿಯಿಂದ ಸೇವಾ ಪಾಕ್ಷಿಕ

| Published : Sep 26 2025, 01:02 AM IST

ಈಶ್ವರನಗರದಲ್ಲಿ ಉಡುಪಿ ಬಿಜೆಪಿಯಿಂದ ಸೇವಾ ಪಾಕ್ಷಿಕ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ನಗರಸಭೆ ಆಶ್ರಯದಲ್ಲಿ ಮಣಿಪಾಲದ ಈಶ್ವರ ನಗರ ವಾರ್ಡ್ ಸಮಿತಿ ಹಾಗೂ ಈಶ್ವರ ನಗರ ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್‌ಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸೇವಾ ಪಾಕ್ಷಿಕ ಕರೆಯ ಅಂಗವಾಗಿ ಮತ್ತು ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯ ಪೂರ್ವಭಾವಿಯಾಗಿ ಈಶ್ವರ ನಗರ ವಾರ್ಡಿನಾದ್ಯಂತ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ನಗರಸಭೆ ಆಶ್ರಯದಲ್ಲಿ ಮಣಿಪಾಲದ ಈಶ್ವರ ನಗರ ವಾರ್ಡ್ ಸಮಿತಿ ಹಾಗೂ ಈಶ್ವರ ನಗರ ರೆಸಿಡೆನ್ಸ್ ವೆಲ್ಫೇರ್ ಅಸೋಸಿಯೇಷನ್‌ಗಳ ಸಹಭಾಗಿತ್ವದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸೇವಾ ಪಾಕ್ಷಿಕ ಕರೆಯ ಅಂಗವಾಗಿ ಮತ್ತು ಮಹಾತ್ಮ ಗಾಂಧೀಜಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯ ಪೂರ್ವಭಾವಿಯಾಗಿ ಈಶ್ವರ ನಗರ ವಾರ್ಡಿನಾದ್ಯಂತ ಸ್ವಚ್ಛತಾ ಅಭಿಯಾನವನ್ನು ಆಯೋಜಿಸಲಾಯಿತು. ಈಶ್ವರನಗರ ಮುಖ್ಯ ವೃತ್ತದ ಬಳಿ ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ್ ಪೂಜಾರಿ, ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪೌರಾಯುಕ್ತ ಮಹಾಂತೇಶ್ ಹಂದರಗಿ, ಅಸೋಸಿಯೇಷನ್ ಅಧ್ಯಕ್ಷ ಹರೀಶ್ ಜಿ. ಕಲ್ಮಾಡಿ, ಪ್ರಧಾನ ಕಾರ್ಯದರ್ಶಿ ಡಾ. ಬಾಲಚಂದ್ರ, ವಾರ್ಡ್ ಸಮಿತಿ ಅಧ್ಯಕ್ಷ ಸುರೇಶ್ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ, ನಗರಸಭೆಯ ಆರೋಗ್ಯ ನಿರೀಕ್ಷಕರಾದ ಪ್ರಕಾಶ್ ಪ್ರಭು ಮತ್ತು ಹರೀಶ್ ಬಿಲ್ಲವ, ಎಲ್ಲಾ ಸಂಘ ಸಂಸ್ಥೆಯ ಪದಾಧಿಕಾರಿಗಳು ಪೌರಕಾರ್ಮಿಕರು ಉಪಸ್ಥಿತರಿದ್ದರು. ನಗರಸಭಾ ಸದಸ್ಯ ಮಂಜುನಾಥ ಮಣಿಪಾಲ ಅಭಿಯಾನವನ್ನು ಸಂಯೋಜಿಸಿದರು.