ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದರು.
ಉಡುಪಿ : ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿದರು.ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಗಂಟಿಹೊಳೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಮಟ್ಟಾರ್ ರತ್ನಾಕರ ಹೆಗ್ಡೆ, ನಿಕಟಪೂರ್ವ ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ನಳಿನಿ ಪ್ರದೀಪ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಒಬಿಸಿ ಮೋರ್ಚಾ ಉಪಾಧ್ಯಕ್ಪ ವಿಠಲ ಪೂಜಾರಿ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಉಡುಪಿ ನಗರ ಮಂಡಲಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರತ್ನಾಕರ್ ಇಂದ್ರಾಳಿ, ಪಕ್ಷದ ಪ್ರಮುಖರಾದ ರವಿ ಅಮೀನ್, ಶ್ರೀಶ ನಾಯಕ್, ವೀಣಾ ಎಸ್. ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.