ಸಾರಾಂಶ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿದ್ದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಂಧಿಸಿ ಪ್ರತಿಭಟನೆಯ ಸಾಂವಿಧಾನಿಕ ಹಕ್ಕನ್ನು ಮೊಟಕುಗಿಳಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಶುಕ್ರವಾರ ಸಂಜೆ ಬಿಜೆಪಿ ಜಿಲ್ಲಾ ಕಚೇರಿಯ ಬಳಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕರಾದ ಯಶ್ಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಮಂಗಳೂರು ವಿಭಾಗ ಪ್ರಭಾರಿ ಉದಯ್ ಕುಮಾರ್ ಶೆಟ್ಟಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆರ್ಗ ದಿನಕರ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪೆರ್ನಾಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದಬೆಟ್ಟು, ಜಿಲ್ಲಾ ವಕ್ತಾರೆ ಗೀತಾಂಜಲಿ ಸುವರ್ಣ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್, ಜಿಲ್ಲಾ ಒಬಿಸಿ ಮೋರ್ಚಾದ ಅಧ್ಯಕ್ಷ ವಿಜಯ್ ಕೊಡವೂರು, ಮಟ್ಟಾರು ರತ್ನಾಕರ ಹೆಗ್ಡೆ, ತಿಂಗಳೇ ವಿಕ್ರಮಾರ್ಜುನ ಹೆಗ್ಡೆ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ ಶೆಟ್ಟಿ, ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಪೃಥ್ವಿರಾಜ್ ಬಿಲ್ಲಾಡಿ, ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ, ಸತ್ಯಾನಂದ ನಾಯಕ, ವೀಣಾ ಶೆಟ್ಟಿ ಸಹಿತ ಹಲವು ನಾಯಕರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.