ಸಾರಾಂಶ
ಉಡುಪಿ: ನಾವು ಸಮಾಜಕ್ಕೆ ಕೊಡುಗೆ ನೀಡಿದ್ದರೆ ಜನತೆ ಸದಾ ನೆನಪಿಸಿಕೊಳ್ಳುತ್ತಾರೆ. ಒಂದು ದೇಶ, ಒಂದು ಸ್ವಾತಂತ್ರ್ಯ ಎಂಬ ಪರಿಕಲ್ಪನೆಯಡಿ ರಾಷ್ಟ್ರೀಯ ಏಕೀಕರಣಕ್ಕೆ ಕಾರಣರಾದ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಸಮರ್ಪಣಾ ಭಾವ, ಸೇವೆ ಸದಾ ಸ್ಮರಣೀಯವಾಗಿದೆ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದ್ದಾರೆ.ಜಿಲ್ಲಾ ಬಿಜೆಪಿ ವತಿಯಿಂದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಶುಕ್ರವಾರ, ಉಡುಪಿ ಕಲ್ಸಂಕದಿಂದ ಬಿಜೆಪಿ ಜಿಲ್ಲಾ ಕಚೇರಿಯ ವರೆಗೆ ನಡೆದ ಏಕತಾ ನಡಿಗೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಮಹಾವೀರ ಹೆಗ್ಡೆ, ನಳಿನಿ ಪ್ರದೀಪ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲ್ಲೇಶ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಪ್ರಮುಖರಾದ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಶಶಾಂಕ್ ಶಿವತ್ತಾಯ, ವಿಜಯ ಕೊಡವೂರು, ದಿನೇಶ್ ಅಮೀನ್, ರಾಜೀವ್ ಕುಲಾಲ್, ಪ್ರಭಾಕರ ಪೂಜಾರಿ, ರಜನಿ ಹೆಬ್ಬಾರ್, ರತ್ನಾಕರ ಇಂದ್ರಾಳಿ, ಶೈಲೇಂದ್ರ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನೀತಾ ಪ್ರಭು, ಶ್ರೀವತ್ಸ, ಡೇನಿಸ್ ಮಾಸ್ಕರೇನಸ್, ಸುಮಾ ನಾಯ್ಕ್, ರಮ್ಯಾ ರಾವ್ ಮುಂತಾದವರಿದ್ದರು.
;Resize=(128,128))
;Resize=(128,128))
;Resize=(128,128))