ಸಾರಾಂಶ
ಮಿಶನ್ ಕಂಪೌಂಡ್‌ನಲ್ಲಿರುವ ಸಿ.ಎಸ್.ಐ ಲೋಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಸ್ಕೂಲ್ ಆಫ್ ನರ್ಸಿಂಗ್‌ನ ಮಲ್ಟಿ ಪರ್ಪಸ್ ಹಾಲ್‌ನಲ್ಲಿ ಆ.15ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಮಿಶನ್ ಕಂಪೌಂಡ್‌ನಲ್ಲಿರುವ ಸಿ.ಎಸ್.ಐ ಲೋಂಬಾರ್ಡ್ ಮೆಮೋರಿಯಲ್ ಆಸ್ಪತ್ರೆಯ ಸ್ಕೂಲ್ ಆಫ್ ನರ್ಸಿಂಗ್‌ನ ಮಲ್ಟಿ ಪರ್ಪಸ್ ಹಾಲ್‌ನಲ್ಲಿ ಆ.15ರಂದು ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಯಿತು.ಈ ಶಿಬಿರದಲ್ಲಿ 75ಕ್ಕೂ ಹೆಚ್ಚು ಉತ್ಸಾಹಿ ದಾನಿಗಳು ಭಾಗವಹಿಸಿದ್ದು, ಇದು ಮಾನವೀಯತೆ ಮತ್ತು ಸಹಾಯದ ಸ್ಫೂರ್ತಿಗೆ ಸಾಕ್ಷಿಯಾಗಿತ್ತು.ಕಾರ್ಯಕ್ರಮವನ್ನು ರೆವೆ. ರಚಲ್ ಡಿಸಿಲ್ವ ಪ್ರಾರ್ಥನೆಯೊಂದಿಗೆ ಆರಂಭಿಸಿದರು ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಯಾಗಿದ್ದ ಬಡಗಬೆಟ್ಟು ಕ್ರೆಡಿಟ್ ಸೊಸೈಟಿಯ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಮಾತನಾಡಿ, ಆಸ್ಪತ್ರೆಯು ಸಾರ್ವಜನಿಕರ ಕಲ್ಯಾಣಕ್ಕಾಗಿ ಹಲವಾರು ಶಿಬಿರಗಳನ್ನು ಆಯೋಜಿಸುತ್ತಿದ್ದು, ಆಸ್ಪತ್ರೆಯ ಇತ್ತೀಚಿನ ಬೆಳವಣಿಗೆಗಳು ಶ್ಲಾಘನೀಯವಾಗಿದೆ ಎಂದು ಹೇಳಿದರು.ಕುಂದಾಪುರದ ರೆಡ್ ಕ್ರಾಸ್ ಬ್ಲಡ್ ಬ್ಯಾಂಕ್ ಅಧ್ಯಕ್ಷ ಜಯಕರ ಶೆಟ್ಟಿ ಕುಂದಾಪುರ, ರಕ್ತದಾನ ಎನ್ನುವುದು ಬದುಕು ನೀಡುವ ದಾನವಾಗಿದೆ. ಪ್ರತಿಯೊಬ್ಬ ದಾನಿಗೂ ನಾವು ಹೃತ್ತೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಹೇಳಿದರು.ಲಯನ್ಸ್ ಕ್ಲಬ್ ಚೇತನ ಉಡುಪಿ ಅಧ್ಯಕ್ಷ ಸಂತೋಷ್ ಕುಮಾರ್, ಕಲಾಕಿರಣ ಕ್ಲಬ್ ಬೈಲೂರ್ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಉಡುಪಿ ರನ್ನರ್ಸ್ ಕ್ಲಬ್ ಅಧ್ಯಕ್ಷ ಡಾ. ತಿಲಕ್ ಚಂದ್ರಪಾಲ್, ಬ್ಲಡ್ ಹೆಲ್ಸ್ ಕೇರ್, ಕರ್ನಾಟಕ ಅಧ್ಯಕ್ಷ ಶೇಖ್ ಫಯಾಜ್, ಲೋಂಬಾರ್ಡ್ ಮೆಮೋರಿಯಲ್ ಆಸ್ಪತ್ರೆ ಆಡಳಿತಾಧಿಕಾರಿ ಡೀನಾ ಪ್ರಭಾವತಿ ಉಪಸ್ಥಿತರಿದ್ದರು. ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿಯು ಸಂಪೂರ್ಣ ಶಿಬಿರವನ್ನು ಸುರಕ್ಷಿತ ಹಾಗೂ ಶಿಸ್ತುಬದ್ಧ ರೀತಿಯಲ್ಲಿ ನಡೆಸಿದರು. ರಕ್ತದಾನಿಗಳಿಗು ಧನ್ಯತೆಯ ಪ್ರಮಾಣಪತ್ರ ಹಾಗೂ ತಂಪಾದ ಪಾನೀಯಗಳೊಂದಿಗೆ ಉಡುಗೊರೆ ನೀಡಲಾಯಿತು. ಪಿ.ಆರ್.ಓ ರೋಹಿ ರತ್ನಾಕರ್ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಡಾ. ನಾರಾಯಣ ಪೆರಲಾಯ ವಂದಿಸಿದರು.