ಉಡುಪಿ: ಪತ್ರಕರ್ತರ ಸಂಘ ಪದಾಧಿಕಾರಿಗಳ ಪ್ರಮಾಣಪತ್ರ ವಿತರಣೆ

| Published : Nov 21 2025, 02:45 AM IST

ಸಾರಾಂಶ

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 - 28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025 - 28ನೇ ಸಾಲಿನ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣಪತ್ರ ವಿತರಣಾ ಕಾರ್ಯಕ್ರಮ ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು.ಸಂಘದ ಚುನಾವಣಾಧಿಕಾರಿಯಾಗಿದ್ದ ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಪದಾಧಿಕಾರಿಗಳಿಗೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರುಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಚುನಾವಣೆ ವ್ಯವಸ್ಥಿತವಾಗಿ ನಡೆಸಿಕೊಟ್ಟ ಚುನಾವಣಾಧಿಕಾರಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಹರೀಶ್ ಕುಂದರ್, ರಾಜ್ಯ ಸಮಿತಿ ಸದಸ್ಯ ಅಸ್ಟ್ರೋ ಮೋಹನ್, ಉಪಾಧ್ಯಕ್ಷರುಗಳಾದ ಉದಯ ಕುಮಾರ್ ಮುಂಡ್ಕೂರು, ಉದಯಕುಮಾರ್ ಶೆಟ್ಟಿ, ಕಾರ್ಯದರ್ಶಿಗಳಾದ ಉಮೇಶ್ ಮಾರ್ಪಳ್ಳಿ, ಸುರೇಶ್ ಎರ್ಮಾಳ್, ಟಿ.ಲೋಕೇಶ್ ಆಚಾರ್ಯ ತೆಕ್ಕಟ್ಟೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಪ್ರಜ್ವಲ್ ಅಮೀನ್, ಜನಾರ್ದನ ಕೊಡವೂರು, ಚೇತನ್ ಮಟಪಾಡಿ, ವಿಜಯ ಆಚಾರ್ಯ ಉಚ್ಚಿಲ, ಪ್ರಮೋದ್ ಸುವರ್ಣ, ಪ್ರವೀಣ್ ಮುದ್ದೂರು, ಮೋಹನ್ ಉಡುಪ, ಮುಹಮ್ಮದ್ ಶರೀಫ್ ಕಾರ್ಕಳ, ರಮಾನಂದ ಅಜೆಕಾರು, ಚಂದ್ರಶೇಖರ್, ಯೋಗೀಶ್ ಕುಂಭಾಶಿ, ರಾಘವೇಂದ್ರ ಪೈ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು.