ಸಾರಾಂಶ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ಕೊನೆಯ ದಿನ ಗುರುವಾರ 5 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಒಟ್ಟು 13 ಜನ ಅಭ್ಯರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ಕೊನೆಯ ದಿನ ಗುರುವಾರ 5 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಒಟ್ಟು 13 ಜನ ಅಭ್ಯರ್ಥಿಗಳು 19 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಜಯಪ್ರಕಾಶ್ ಹೆಗ್ಡೆ, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ, ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಕೆ.ಟಿ. ರಾಧಾಕೃಷ್ಣ, ಜನಹಿತ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಕುಮಾರ್ ಪೂಜಾರಿ, ಕರುನಾಡ ಸೇವಕರ ಪಕ್ಷದ ಅಭ್ಯರ್ಥಿಯಾಗಿ ಶಬರೀಶ್ ಆರ್., ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎಲ್. ರಂಗನಾಥ್ ಗೌಡ, ಪ್ರೌಟಿಸ್ಟ್ ಸರ್ವ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಎಂ.ಕೆ. ದಯಾನಂದ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಸಚಿನ್ ಬಿ.ಕೆ. ಅವರು ನಾಮಪತ್ರಗಳನ್ನು ಸಲ್ಲಿಸಿದ್ದರೆ, ಸ್ವತಂತ್ರ ಅಭ್ಯರ್ಥಿಗಳಾಗಿ ಸುಧೀರ್ ಕಾಂಚನ್, ವಿಜಯಕುಮಾರ್ ಎಂ.ಜಿ., ಕೆ.ಆರ್. ಕುಸುಮ, ರಾಜ್ ಬಲ್ಲಾಳ್ ಹಾಗೂ ಎಚ್. ಸುರೇಶ್ ಪೂಜಾರಿ ಅವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
-----------ಮತದಾನದ ದಿನದಂದು ವೇತನ ಸಹಿತ ರಜೆ
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಏ.26ರಂದು ನಡೆಯುವ ಚುನಾವಣೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಸಾಂವಿಧಾನಿಕ ಹಕ್ಕಿನಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ, ಮತದಾನ ದಿನದಂದು ಮತದಾನ ಮಾಡಲು ಅನುಕೂಲವಾಗುವಂತೆ ಸಂಘ-ಸಂಸ್ಥೆಗಳಲ್ಲಿ, ವಾಣಿಜ್ಯ ಉದ್ದಿಮೆಗಳಲ್ಲಿ, ಕೈಗಾರಿಕಾ ಘಟಕ ಸೇರಿದಂತೆ ಸಣ್ಣ ಮತ್ತು ದೊಡ್ಡ ಘಟಕಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕ ಹಾಗೂ ಸಿಬ್ಬಂದಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.