ಸಾರಾಂಶ
ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆ ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಇತರ ಸಂಘಸಂಸ್ಥೆಗಳ ಆಶ್ರಯದಲ್ಲಿ ಹೊಸಬಡಾಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ 0-6 ವರ್ಷದೊಳಗಿನ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಅಪೌಪ್ಠಿಕತೆ ಮಾಹಿತಿ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ. ಗಡಾದ್ ಉದ್ಘಾಟಿಸಿದರು.ದೈನಂದಿನ ಆಹಾರ ಪದ್ಧತಿಯಲ್ಲಿ ತರಕಾರಿ, ಹಣ್ಣುಗಳನ್ನು ಸೇರಿಸುವುದು, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಲಭ್ಯ ಇರುವ ಸರ್ಕಾರಿ ಸವಲತ್ತುಗಳನ್ನು ಬಳಸಿಕೊಳ್ಳುವಂತೆ ತಿಳಿಸಿದರು.
ಕುಂದಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಮೇಶ್ ಟಿ. ಎಂ. ಮಾತನಾಡಿ, ಅಂಗನವಾಡಿಗಳ ಮೂಲಕ ಅಪೌಷ್ಟಿಕ ಮಕ್ಕಳ ದತ್ತು ಪಡೆಯುವ ಯೋಜನೆಯನ್ನು ಅಗತ್ಯತೆ ಇರುವ ಕುಟುಂಬಗಳು ಪಡೆದುಕೊಳ್ಳಬೇಕು. ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಲು ರಾಷ್ಟ್ರಧ್ವಜದ ತ್ರಿವರ್ಣವುಳ್ಳ ಹಣ್ಣುಹಂಪಲು, ತರಕಾರಿಸೊಪ್ಪು, ಬೇಳೆಕಾಳುಗಳು, ಹಾಲು, ಮೊಟ್ಟೆ, ಮೀನು, ಮಾಂಸ ಹೀಗೆ ಸಮತೋಲನ ಆಹಾರವನ್ನು ರೂಡಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೋಟೇಶ್ವರ ಗ್ರಾ.ಪಂ. ಅಧ್ಯಕ್ಷೆ ನಾಗರತ್ನ ವಹಿಸಿದ್ದರು. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ ಉಪನ್ಯಾಸಕ ಡಾ. ಮಂಜುನಾಥ್ ಜೆ.ಎ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಕೆ., ಸ್ಥಳೀಯ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ. ಪೂರ್ಣಿಮಾ ಆರ್. ಶೇಟ್, ಜಿಲ್ಲಾ ಆರ್.ಸಿ.ಎಚ್., ಅಧಿಕಾರಿ ಡಾ.ಜೋತ್ಸ್ನಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ ನಾಯಕ್, ಅಂಗನವಾಡಿ ಕಾರ್ಯಕರ್ತೆ ಶೋಭಾ ಉಪಸ್ಥಿತರಿದ್ದರು.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯ ಪ್ರಶಿಕ್ಷಣಾರ್ಥಿ ವೃಂದಾ ಬಿ. ತಾಮಸೆ ಸ್ವಾಗತಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ ಕಾರ್ಯಕ್ರಮದ ನಿರೂಪಿಸಿ, ವಂದಿಸಿದರು.