ಶೀರೂರು ಪರ್ಯಾಯಕ್ಕೆ ಉಡುಪಿ ನಗರದ ಬೀದಿಗಳಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಮಾಡಲಾದ ವಿದ್ಯುತ್ ದೀಪಾಲಂಕಾರವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ಗುರುವಾರ ಸಂಜೆ ನಗರದ ಕೋರ್ಟ್ ರಸ್ತೆಯಲ್ಲಿ ಉದ್ಘಾಟಿಸಿದರು.
ಉಡುಪಿ: ಶೀರೂರು ಪರ್ಯಾಯಕ್ಕೆ ಉಡುಪಿ ನಗರದ ಬೀದಿಗಳಲ್ಲಿ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ಮಾಡಲಾದ ವಿದ್ಯುತ್ ದೀಪಾಲಂಕಾರವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಅವರು ಗುರುವಾರ ಸಂಜೆ ನಗರದ ಕೋರ್ಟ್ ರಸ್ತೆಯಲ್ಲಿ ಉದ್ಘಾಟಿಸಿದರು.
ನಂತರ ಅವರು ಮೊದಲ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ, ಸಿಂಗಾರಗೊಂಡ ನಗರ, ಬೀದಿಗಳು ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವುದು ಸಂತೋಷವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್‌ಪಾಲ್ ಸುವರ್ಣ ಶೀರೂರು ಪರ್ಯಾಯಕ್ಕೆ ಉಡುಪಿ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರ ಮೆರುಗು ಹೆಚ್ಚಿಸಲು ಈ ಬಾರಿ ಉಡುಪಿ ನಗರಸಭೆ ಅನುದಾನದೊಂದಿಗೆ 50 ಲಕ್ಷ ರು. ವೆಚ್ಚದಲ್ಲಿ ವಿಶೇಷವಾಗಿ ಈ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ ಎಂದರು.ವಿದ್ಯುದ್ದೀಪಾಲಂಕಾರ ವ್ಯವಸ್ಥೆ ಮಾಡಿದ ಕೃಷ್ಣ ಕುಲಾಲ್ ಅವರನ್ನು ಶಾಸಕರು ಅಭಿನಂದಿಸಿದರು. ಕೆನರಾಬ್ಯಾಂಕ್ ಜಿಎಂ ಗಂಗಾಧರ್, ನಗರಸಭೆ ಆಯುಕ್ತ ಮಹಾಂತೇಶ್, ನಗರಸಭೆ ನಿಕಟಪೂರ್ವ ಅಧ್ಯಕ್ಷ ಪ್ರಭಾಕರ್ ಪೂಜಾರಿ ಮತ್ತು ಉಪಾದ್ಯಕ್ಷೆ ರಜನಿ ಹೆಬ್ಬಾರ್, ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಶೆಟ್ಟಿ ಕುತ್ಯಾರ್, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್, ಪ್ರಮುಖರಾದ ವಿಷ್ಣುಮೂರ್ತಿ ಆಚಾರ್ಯ, ನಯನಾ ಗಣೇಶ್, ಪದ್ಮಲತಾ ಮೊದಲಾದವರು ಉಪಸ್ಥಿತರಿದ್ದರು.