ಉಡುಪಿ: ಕೆಥೊಲಿಕ್ ಸಭಾದಿಂದ ನಿರ್ಮಲ ಪರಿಸರ ಅಭಿಯಾನ

| Published : Oct 05 2024, 01:35 AM IST

ಸಾರಾಂಶ

ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನೇತೃತ್ವದಲ್ಲಿ ನಿರ್ಮಲ ಪರಿಸರ ಅಭಿಯಾನದಡಿಯಲ್ಲಿ ಧರ್ಮಪ್ರಾಂತ್ಯದ ಎಲ್ಲ 51 ಘಟಕಗಳಲ್ಲಿ ಏಕಕಾಲದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನಮ್ಮ ಸುತ್ತಮುತ್ತಲಿನ ಸ್ವಚ್ಛತೆಯೊಂದಿಗೆ ಪರಿಸರದ ಸ್ವಚ್ಚತೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಕೆಥೊಲಿಕ್ ಸಭಾ ಉಡುಪಿ ಪ್ರದೇಶದ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ಹೇಳಿದರು.ಅವರು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ನೇತೃತ್ವದಲ್ಲಿ ನಿರ್ಮಲ ಪರಿಸರ ಅಭಿಯಾನದಡಿಯಲ್ಲಿ ಧರ್ಮಪ್ರಾಂತ್ಯದ ಎಲ್ಲ 51 ಘಟಕಗಳಲ್ಲಿ ಏಕಕಾಲದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಕಲ್ಯಾಣಪುರದಲ್ಲಿ ಚಾಲನೆ ನೀಡಿ ಮಾತನಾಡಿದರು.ಸ್ಮರ್ಧಾತ್ಮಕ ಯುಗದಲ್ಲಿ ನಾವು ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡಿದರೂ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಹಿಂದಿದ್ದೇವೆ. ಪರಿಸರ ಸ್ವಚ್ಛವಾಗಿ ಇರುವಂತೆ ಪ್ರತಿಯೊಬ್ಬರು ಎಚ್ಚರಿಕೆ ವಹಿಸುವ ಮೂಲಕ ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಮೊದಲು ನಮ್ಮ ಮನೆ, ಕಚೇರಿ ಸುತ್ತ ಒಳ್ಳೆಯ ಪರಿಸರ ನಿರ್ಮಾಣವಾಗಲು ಪರಿಶ್ರಮ ಪಡೆಬೇಕು ಅಂದಾಗ ಮಾತ್ರ ಸ್ವಲ್ಪ ಮಟ್ಟಿಗೆ ಬದಲಾವಣೆ ಕಾಣಲು ಸಾಧ್ಯ ಎಂದರು.ಕೇಂದ್ರ ಸಮಿತಿಯ ಸೂಚನೆ ಮೇರೆಗೆ ನಿರ್ಮಲ ಪರಿಸರ ನಮ್ಮ ಕರ್ತವ್ಯ ಅಭಿಯಾನವನ್ನು ಉಡುಪಿ ಧರ್ಮಪ್ರಾಂತ್ಯದ 51 ಕೆಥೊಲಿಕ್ ಸಭಾ ಘಟಕಗಳು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಚರ್ಚ್ ಪರಿಸರ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು.ಈ ವೇಳೆ ಆಯಾ ಚರ್ಚ್‌ಗಳ ಧರ್ಮಗುರುಗಳು, ಘಟಕಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.