ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.

ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ 2025ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಉಡುಪಿ ಜಿಲ್ಲೆಯ ಮೂವರು ಪೊಲೀಸ್ ಸಿಬ್ಬಂದಿ ಭಾಜನರಾಗಿದ್ದಾರೆ.ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಚಂದ್ರ ಶೆಟ್ಟಿ ಗಣನೀಯ ಸೇವೆಗೆ ಮತ್ತು ಕರಾವಳಿ ಕಾವಲು ಪೊಲೀಸ್ ಪಡೆದಲ್ಲಿ ಸೇವೆ ಸಲ್ಲಿಸುತ್ತಿರುವ ಎಎಚ್‌ಸಿ ಸಂತೋಷ್ ಶೆಟ್ಟಿ ಅವರ ಇಲಾಖೆಗೆ ವಿಶಿಷ್ಟ ಸೇವೆಗಾಗಿ ಚಿನ್ನದ ಪದಕ ಪಡೆದಿದ್ದಾರೆ. ನಕ್ಸಲ್ ನಿಗ್ರಹ ಪಡೆ, ಕಾರ್ಕಳದಲ್ಲಿ ಸೇವೆ ಸಲ್ಲಿಸುತ್ತಿರುವ ಆರ್‌ಎಸ್‌ಐ ಮಂಜುನಾಥ ದೇವರಮನೆ ಅವರು ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ತೋರಿದ ಅತ್ಯುತ್ತಮ ಸೇವೆಗಾಗಿ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದಕ ಪುರಸ್ಕೃತರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹಾಗೂ ಕರಾವಳಿ ಕಾವಲು ಪಡೆ ಮತ್ತು ನಕ್ಸಲ್ ನಿಗ್ರಹ ಪಡೆಯ ಪ್ರಭಾರ ಎಸ್‌ಪಿ ಹರಿರಾಮ್ ಶಂಕರ್ ಅಭಿನಂದಿಸಿದ್ದಾರೆ.