ಉಡುಪಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಣಾಳಿಕೆ ಬಿಡುಗಡೆ

| Published : Apr 23 2024, 12:47 AM IST

ಉಡುಪಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಣಾಳಿಕೆ ಬಿಡುಗಡೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರ ‘ಸಮೃದ್ಧ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರ ನನ್ನ ಕನಸು’ ಪ್ರಣಾಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಸೋಮವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬಿಡುಗಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆಯವರ ‘ಸಮೃದ್ಧ ಉಡುಪಿ ಮತ್ತು ಚಿಕ್ಕಮಗಳೂರು ಕ್ಷೇತ್ರ ನನ್ನ ಕನಸು’ ಪ್ರಣಾಳಿಕೆಯನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಸೋಮವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬಿಡುಗಡೆಗೊಳಿಸಿದರು.

ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಪ್ರತ್ಯೇಕ ಜಿಲ್ಲೆಯಾಗಲು ಜಯಪ್ರಕಾಶ್ ಹೆಗ್ಡೆ ಅವರೇ ಕಾರಣ. ಶಾಸಕ, ಸಚಿವ, ಸಂಸದ, ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷನಾಗಿ ಉತ್ತಮ ಕೆಲಸ ಮಾಡಿದ್ದಾರೆ. ಈ ಜಿಲ್ಲೆಯ ಜನತೆಗಾಗಿ ಅನೇಕ ಯೋಜನೆಗಳನ್ನು ಸರಕಾರದಿಂದ ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿಸಿದ್ದಾರೆ. ಅಭಿವೃದ್ಧಿ ಮುಂದುವರೆಯುವುದಕ್ಕೆ ಅವರನ್ನು ಜಿಲ್ಲೆಯ ಜನತೆ ಗೆಲ್ಲಿಸಿ ಎಂದು ಮನವಿ ಮಾಡಿದರು.

ರಾಜ್ಯದ ಇತಿಹಾಸದಲ್ಲಿ ಬಡವರಿಗೆ ದಾಖಲೆ ಸಂಖ್ಯೆಯ ನಿವೇಶನಗಳನ್ನು ನೀಡಿದವರು ಎಸ್.ಬಂಗಾರಪ್ಪ. ರಾಜ್ಯದಲ್ಲಿ ಕೈಗಾರಿಕಾ ಕಾಂತ್ರಿಗೆ ಅವರೇ ಕಾರಣ, ಅವರ ಮಗಳು ಗೀತಾ ಶಿವರಾಜ್ ಕುಮಾರ್ ಗೆದ್ದರೆ ತಂದೆಯ ಆದರ್ಶವನ್ನು ಮುಂದುವರಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆ, ಆದ್ದರಿಂದ ಅವರೂ ಗೆಲ್ಲುವುದು ಅಗತ್ಯವಿದೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಅವರ ಸ್ಪರ್ಧೆ ಬಿಜೆಪಿ ಅಬ್ಯರ್ಥಿಯನ್ನು ಸೋಲಿಸುತ್ತದೆ ಎಂದವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್, ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. .............................

ಕ್ಷೇತ್ರದಲ್ಲಿ ಬಂಗಾರಪ್ಪ ಅವರ ಬಗ್ಗೆ ಪ್ರೀತಿ ಇದೆ

ಶಿವಮೊಗ್ಗ - ಬೈಂದೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪರ ಒಳ್ಳೆಯ ವಾತಾವರಣ ವ್ಯಕ್ತವಾಗಿದೆ. ಹೊದಲ್ಲೆಲ್ಲಾ ಬಂಗಾರಪ್ಪನವರ ಬಗ್ಗೆ ಪ್ರೀತಿ ಕ್ಷೇತ್ರದ ಜನತೆಯಲ್ಲಿ ಕಂಡಿದ್ದೇನೆ. ಈ ಪ್ರೀತಿ ಮತ್ತು ಕಾಂಗ್ರೆಸ್ ಸರ್ಕಾರದ ಸಾಧನೆ ನನ್ನನ್ನು ಗೆಲ್ಲಿಸಲಿದೆ. ಕ್ಷೇತ್ರದ ಬಗ್ಗೆ ತುಂಬಾ ಕನಸುಗಳಿವೆ. ಗೆದ್ದರೇ ಇಲ್ಲೇ ಇದ್ದು ಕೆಲಸ ಮಾಡುತ್ತೇನೆ.

-ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ