ಸಾರಾಂಶ
ಉಡುಪಿ ಜಿಲ್ಲಾ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಇದೇ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಬಗ್ಗೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲಾ ವ್ಯಾಪ್ತಿಯ ಸ್ಥಳೀಯಾಡಳಿತ ಸಂಸ್ಥೆಗಳಿಗೆ ಇದೇ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಪ್ರಕ್ರಿಯೆಯ ಬಗ್ಗೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು.
ಜಿಲ್ಲೆಯ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣಾ ಮೇಲುಸ್ತುವಾರಿಯಾಗಿ ಕೆಪಿಸಿಸಿಯಿಂದ ನಿಯುಕ್ತಿಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಕಾಪು, ಕಾರ್ಕಳ, ಕುಂದಾಪುರ ಮತ್ತು ಸಾಲಿಗ್ರಾಮ ಪಟ್ಟಣ ಪಂಚಾಯಿತಿಯ ಚುನಾಯಿತ ಕಾಂಗ್ರೆಸ್ ಸದಸ್ಯರ ಮಾಹಿತಿ ಪಡೆದು ಅಧಿಕಾರಕ್ಕೇರುವ ಅವಕಾಶವಿದ್ದಲ್ಲಿ ಕೈಚೆಲ್ಲದಂತೆ ಎಲ್ಲ ರೀತಿಯಲ್ಲೂ ಕಾರ್ಯತಂತ್ರ ರೂಪಿಸುವಂತೆ ತಿಳಿಸಿದರು.ವಿವಿಧ ಸ್ಥಳೀಯಾಡಳಿತ ಸಂಸ್ಥೆಗಳ ಸದಸ್ಯರಿಂದ ಅಭಿಪ್ರಾಯ ಸಂಗ್ರಹಿಸಿ, ಆಯಾ ಕ್ಷೇತ್ರದ ನಿಕಟಪೂರ್ವ ವಿ.ಸ. ಚುನಾವಣಾ ಅಭ್ಯರ್ಥಿಗಳು ಮತ್ತು ಬ್ಲಾಕ್ ಅಧ್ಯಕ್ಷರ ಮುತುವರ್ಜಿಯಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಲು ತೀರ್ಮಾನಿಸಲಾಯಿತು.ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಶೋಕ್ ಕುಮಾರ, ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೋಲ್ಕೆಬೈಲ್, ಪ್ರಮುಖರಾದ ಹರೀಶ್ ಕಿಣಿ, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ, ಶರ್ಫುದ್ದೀನ್ ಶೇಖ್, ಸತೀಶ್ ಕೊಡವೂರು, ದೇವಕಿ ಸಣ್ಣಯ್ಯ, ಉದ್ಯಾವರ ನಾಗೇಶ್ ಕುಮಾರ್, ಕಿರಣ್ ಹೆಗ್ಡೆ, ಹಮೀದ್, ಪ್ರಭಾಕರ ಆಚಾರಿ, ಸೌರಭ್ ಬಲ್ಲಾಳ್, ಮಹೇಶ್ ಸುವರ್ಣ, ಗಣೇಶ್ ನೆರ್ಗಿ ಉಪಸ್ಥಿತರಿದ್ದರು.