ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ, ಕೆಪಿಸಿಸಿ ಸದಸ್ಯರ, ಬ್ಲಾಕ್ ಅಧ್ಯಕ್ಷರು ಹಾಗೂ ಎಲ್ಲ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆ
ಉಡುಪಿ : ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ, ಕೆಪಿಸಿಸಿ ಸದಸ್ಯರ, ಬ್ಲಾಕ್ ಅಧ್ಯಕ್ಷರು ಹಾಗೂ ಎಲ್ಲ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆ ನಡೆಯಿತು.
ಸಭೆಯಲ್ಲಿ ಜಿಲ್ಲೆಯ ಸಮಗ್ರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ, ಇದರ ಪರಿಹಾರಕ್ಕಾಗಿ ಜಿಲ್ಲಾ ಕಾಂಗ್ರೆಸ್ ನಿಯೋಗವು ಮುಖ್ಯಮಂತ್ರಿ ಅವರನ್ನು ಭೇಟಿಯಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.ಕೇಂದ್ರ ಸರ್ಕಾರ ಮನ್ ರೇಗಾ ಯೋಜನೆ ಹೆಸರು ಬದಲಾಯಿಸುದರೊಂದಿಗೆ ಗ್ರಾಮೀಣ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದುಕೊಂಡಿದೆ, ಈ ಹೊಸ ಮಸೂದೆ ಮೂಲಕ ಕೇಂದ್ರ ಸರಕಾರ ರಾಜ್ಯಗಳ ಮೇಲೆ ಆರ್ಥಿಕ ಹೊರೆ ಹಾಕಿದೆ. ಆದ್ದರಿಂದ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಪಕ್ಷದ ಬೂತ್ ಮತ್ತು ಗ್ರಾಮೀಣ ಹಂತದಲ್ಲಿ, ತಾಲೂಕು ಜಿಲ್ಲಾ ಮಟ್ಟದಲ್ಲಿ ಪ್ರತಿಭಟಿಸಬೇಕು, ಜನಸಂಪರ್ಕ ಸಭೆ, ಪಾದಯಾತ್ರೆಗಳನ್ನು ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಬೇಕು ಎಂದು ಸಭೆಯಲ್ಲಿ ನಿರ್ಧರಿಸಲಾಯಿತು ಮತ್ತು ಈ ಪ್ರತಿಭಟನೆಗಳಲ್ಲಿ ಪಕ್ಷದ ಎಲ್ಲ ನಾಯಕರು, ಕಾರ್‍ಯಕರ್ತರು ಈ ಪ್ರತಿಭಟನೆಗಳಲ್ಲಿ ಭಾಗವಹಿಸಬೇಕು ಎಂದು ಸೂಚಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಸ್ವಾಗತಿಸಿ, ಮುಂದಿನ ದಿನಗಳಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಬೇಕಾದ ಕಾರ್‍ಯಕ್ರಮಗಳ ಬಗ್ಗೆ ವಿವರಿಸಿದರು. ಸಭೆಯಲ್ಲಿ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಪೂರ್. ಜಿಲ್ಲಾ ಕಾಂಗ್ರೆಸ್ ಕಾರ್‍ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಗೋಪಾಲ ಪೂಜಾರಿ, ಮುಖಂಡರಾದ ವೆರೋನಿಕಾ ಕರ್ನೆಲಿಯೋ, ಉದಯ ಕುಮಾರ್ ಶೆಟ್ಟಿ ಮುನಿಯಾಲು, ದಿನೇಶ್ ಹೆಗ್ಡೆ ಮೊಳವಳ್ಳಿ, ನೀರೇ ಕೃಷ್ಣ ಶೆಟ್ಟಿ, ದಿನೇಶ್ ಪುತ್ರನ್, ಭಾಸ್ಕರ ರಾವ್ ಕಿದಿಯೂರು, ಕಿರಣ್ ಹೆಗ್ಡೆ, ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ಸಂತೋಷ್ ಕುಲಾಲ್. ಹರಿಪ್ರಸಾದ್ ಶೆಟ್ಟಿ, ಅರವಿಂದ ಪೂಜಾರಿ, ಗೋಪಿನಾಥ್ ಭಟ್, ಶಂಕರ್ ಕುಂದರ್, ಶಬ್ಬಿರ್ ಅಹ್ಮದ್, ಕೀರ್ತಿ ಶೆಟ್ಟಿ, ಜ್ಯೋತಿ ಹೆಬ್ಬಾರ್, ಹಬೀಬ್ ಆಲಿ, ಹರೀಶ್ ಶೆಟ್ಟಿ ಪಾಂಗಳ, ಕಿರಣ್ ಹೆಗ್ಡೆ, ಶರ್ಪುದ್ದೀನ್ ಶೇಖ್, ಮಹಾಬಲ ಕುಂದರ್, ಜಯ ಕುಮಾರ್, ರೋಶನ್ ಶೆಟ್ಟಿ, ಶಶಿಧರ್ ಶೆಟ್ಟಿ ಎಳ್ಳೂರು, ರತ್ನಾಕರ ಪೂಜಾರಿ ಮುಂತಾದವರಿದ್ದರು, ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಅಣ್ಣಯ್ಯ ಸೇರಿಗಾರ್ ಕಾರ್ಯಕ್ರಮ ನಿರ್ವಹಿಸಿ, ಜಿಲ್ಲಾ ಪ್ರ .ಕಾರ್ಯದರ್ಶಿ ಬಿ. ನರಸಿಂಹಮೂರ್ತಿ ವಂದಿಸಿದರು.