ಕೇಂದ್ರ ಸರ್ಕಾರ ವಿರುದ್ಧ ಉಡುಪಿ ಕಾಂಗ್ರೆಸ್‌ ಪ್ರತಿಭಟನೆ

| Published : Apr 17 2025, 12:15 AM IST

ಸಾರಾಂಶ

ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆದಿಉಡುಪಿಯ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕೇಂದ್ರ ಬಿಜೆಪಿ ಸರ್ಕಾರ ವಿರೋಧ ಪಕ್ಷದ ನಾಯಕರ ಧ್ವನಿಯನ್ನು ದಮನಗೊಳಿಸುತ್ತಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆದಿಉಡುಪಿಯ ಆದಾಯ ತೆರಿಗೆ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಬಿಜೆಪಿ ಸರ್ಕಾರದ ಧೋರಣೆಯ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಅದಾಯ ತೆರಿಕೆ ಕಚೇರಿಯೊಳಗೆ ನುಗ್ಗುವುದಕ್ಕೆ ಪ್ರಯತ್ನಿನಿಸಿದರು. ಕೆಲವು ಕಾರ್ಯಕರ್ತರು ಮುಚ್ಚಿದ್ದ ಕಚೇರಿಯ ಗೇಟನ್ನು ಏರಿ ಒಳನುಗ್ಗಲು ಪ್ರಯತ್ನಿಸಿದಾಗ ಅವರನ್ನು ಪೊಲೀಸರು ತಡೆದರು.

ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದ್ದು, ಪ್ರಜಾಪ್ರಭುತ್ವದ ಅಂಗಸಂಸ್ಥೆಗಳಾದ ಇ.ಡಿ., ಸಿ.ಬಿ.ಐ., ಐ.ಟಿ.ಗಳನ್ನು ತನ್ನ ಕೈಗೊಂಬೆಗಳನ್ನಾಗಿ ಮಾಡಿ, ದುರುಪಯೋಗಪಡಿಸಿಕೊಳ್ಳುತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.ಈ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಉಪಾಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಪಕ್ಷದ ನಾಯಕರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ರಮೇಶ್ ಕಾಂಚನ್, ಶುಭದ್ ರಾವ್, ಗೋಪಿನಾಥ್ ಭಟ್, ನವೀನ್ ಚಂದ್ರ ಸುವರ್ಣ, ರಾಘವೇಂದ್ರ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಮುರಳಿ ಶೆಟ್ಟಿ, ದಿನೇಶ್ ಪುತ್ರನ್, ಹರೀಶ್ ಕಿಣಿ, ಭುಜಂಗ ಶೆಟ್ಟಿ, ಕೀರ್ತಿ ಶೆಟ್ಟಿ, ಅಮೃತ್ ಶೆಣೈ, ಮಹಾಬಲ ಕುಂದರ್, ಕೃಷ್ಣ ಶೆಟ್ಟಿ ಬಜಗೋಳಿ, ವಿಶ್ವಾಸ್ ಅಮೀನ್, ಹಬೀಬ್ ಆಲಿ, ವೆರೋನಿಕಾ ಕರ್ನೇಲಿಯೋ, ಡಾ. ಸುನಿತಾ ಶೆಟ್ಟಿ, ಜ್ಯೋತಿ ಹೆಬ್ಬಾರ್, ಮೀನಾಕ್ಷಿ ಮಾಧವ ಬನ್ನಂಜೆ, ರೋಶ್ನಿ ಒಲಿವರ್, ಸಂಧ್ಯಾ ತಿಲಕ್‌ರಾಜ್ ಮತ್ತಿತರರು ಭಾಗವಹಿಸಿದ್ದರು.