ಸಾರಾಂಶ
ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಸಿ.ಟಿ. ರವಿ ಕಡಿಯಾಳಿಯಲ್ಲಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಮುಂದಿನ ಲೋಕಸಭಾ ಚುನಾವಣೆಯ ಪ್ರಯುಕ್ತ ‘ಮೋದಿ ಮತ್ತೊಮ್ಮೆ’ ಗೋಡೆ ಬರಹಕ್ಕೆ ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ನಗರದ ಕಡಿಯಾಳಿಯಲ್ಲಿ ಚಾಲನೆ ನೀಡಿದರು.ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್ ಬನ್ನಂಜೆ, ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ದ.ಕ. ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತಿತರರಿದ್ದರು.ಸಚಿವ ತಂಗಡಗಿಯವರಿಂದ ಇಲಾಖಾ ಪರಿಶೀಲನಾ ಸಭೆಉಡುಪಿ- ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುಳ ವರ್ಗಗಳ ಇಲಾಖೆ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯನ್ನು ಹಿಂದುಳಿದ ವರ್ಗ ಮತ್ತು ಕನ್ನಡ, ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಿಗ ನಡೆಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ಜಿ.ಪಂ. ಉಪ ಕಾರ್ಯದರ್ಶಿ ರಾಜು ಮೊಗವೀರ, ದೇವರಾಜು ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕಾಂತರಾಜು, ಹಿಂದುಳಿದ ವರ್ಗದ ಜಂಟಿ ನಿರ್ದೇಶಕ ಸಿ.ಕೆ. ಜಗದೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೈಸೂರು ವಿಭಾಗದ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ್, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಮರೇಗೌಡ ಪಾಟೀಲ್, ಕರ್ನಾಟಕ ಮರಾಠ ಸಮುದಾಯದ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಕಾಶ್ ಆರ್.ಪಾಗೋಜಿ, ಸಚಿವರ ಆಪ್ತ ಕಾರ್ಯದರ್ಶಿ ಮಧುಸೂದನ್ ಶೆಟ್ಟಿ ಉಪಸ್ಥಿತರಿದ್ದರು.