ಸಾರಾಂಶ
ಉಡುಪಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿ ವತಿಯಿಂದ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನವಮ ವರ್ಷದ ಉಡುಪಿ ದಸರಾ- ಶಾರದಾ ಮಹೋತ್ಸವವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಸಾರ್ವಜನಿಕ ಶ್ರೀ ಶಾರದೊತ್ಸವ ಸಮಿತಿ ವತಿಯಿಂದ ಅಜ್ಜರಕಾಡು ಗೋವಿಂದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ನವಮ ವರ್ಷದ ಉಡುಪಿ ದಸರಾ- ಶಾರದಾ ಮಹೋತ್ಸವವನ್ನು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು.ಸಮಾರಂಭದಲ್ಲಿ ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ ಕಿದಿಯೂರು, ಗಣ್ಯರಾದ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಮತ್ಸ್ಯ ಉದ್ಯಮಿ ಆನಂದ ಪಿ. ಸುವರ್ಣ, ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಅಧ್ಯಕ್ಷ ಸಾಧು ಸಾಲ್ಯಾನ್, ಕಟಪಾಡಿ ಕಾಳಿಕಾಂಬ ದೇವಸ್ಥಾನ ಮೊಕ್ತೇಸರ ಮುರಹರಿ ಆಚಾರ್ಯ, ಗಣ್ಯರಾದ ಅಂಡಾರು ದೇವಿಪ್ರಸಾದ್ ಶೆಟ್ಟಿ, ವೀಣಾ ಎಸ್. ಶೆಟ್ಟಿ ವೇದಿಕೆಯಲ್ಲಿದ್ದರು.ಶಾರದಾ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ರಾವ್ ಮಟ್ಟು, ಉಪಾಧ್ಯಕ್ಷ ರಾಧಾಕೃಷ್ಣ ಮೆಂಡನ್ ಮಲ್ಪೆ, ಸುರೇಶ್ ಶೇರಿಗಾರ್, ಪದ್ಮಾ ರತ್ನಾಕರ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.ದಾಮೋದರ್ ಭಟ್ ಕರಂಬಳ್ಳಿ ಧಾರ್ಮಿಕ ಪೂಜಾ ವಿಧಾನಗಳನ್ನು ನೆರವೇರಿಸಿದರು, ಜಿಲ್ಲಾಮಟ್ಟದ ಚಿತ್ರಕಲಾ ಸ್ಪರ್ಧೆ, ಭಕ್ತಿ ಗೀತೆ ಸ್ಪರ್ಧೆ ನಡೆಯಿತು. ವಿಜೇತರರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಸಮಾರಂಭದ ಬಳಿಕ ಕುಣಿತಾ ಭಜನೆ ನಡೆಯಿತು. ಶಾರದೋತ್ಸವ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ತಾರಾ ಉಮೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.