ಉಡುಪಿ: ಸರ್ಕಾರಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಕರವೇ ಆಗ್ರಹ

| Published : Jul 31 2024, 01:11 AM IST

ಉಡುಪಿ: ಸರ್ಕಾರಿ ಮೆಡಿಕಲ್, ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗೆ ಕರವೇ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಈ ಎರಡೂ ಕಾಲೇಜುಗಳ ಸ್ಥಾಪನೆಗೆ ಈಗಾಗಲೇ 2020 ಮತ್ತು 2022ರಲ್ಲಿ ಅಂದಿನ ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ ಮಾಡಿತ್ತು, ಆದರೆ ಈ ಬಗ್ಗೆ ಯಾವುದೇ ಕ್ರಮ ಆಗದ ಕಾರಣ ಮತ್ತೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇದಿಕ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಕರ್ನಾಟಕ ರಕ್ಷಣಾ ವೇದಿಕೆಯು ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕಾಲೇಜು ಮಂಜೂರಾತಿಗೆ ಶಾಸಕ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.

ಈ ಎರಡೂ ಕಾಲೇಜುಗಳ ಸ್ಥಾಪನೆಗೆ ಈಗಾಗಲೇ 2020 ಮತ್ತು 2022ರಲ್ಲಿ ಅಂದಿನ ಸರ್ಕಾರಕ್ಕೆ ರಕ್ಷಣಾ ವೇದಿಕೆ ಮನವಿ ಮಾಡಿತ್ತು, ಆದರೆ ಈ ಬಗ್ಗೆ ಯಾವುದೇ ಕ್ರಮ ಆಗದ ಕಾರಣ ಮತ್ತೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವೇದಿಕ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಉಡುಪಿ ಜಿಲ್ಲೆ ಸ್ಥಾಪನೆಯಾಗಿ 28 ವರ್ಷ ಕಳೆದರೂ ಜಿಲ್ಲೆಯಲ್ಲಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಸರ್ಕಾರಿ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಯಾಗಿಲ್ಲ, ಇದರಿಂದ ಜಿಲ್ಲೆಯ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಆಸೆಗೆ ತಣ್ಣೀರು ಎರಚಿದಂತಾಗಿದೆ. ಶೀಘ್ರ ಜಿಲ್ಲೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಮನವಿಗೆ ರಾಜ್ಯ ಸರ್ಕಾರ, ಜಿಲ್ಲೆಯ ಜನಪ್ರತಿನಿಧಿಗಳು ಸ್ಪಂದಿಸದಿದ್ದಲ್ಲಿ ಕರವೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತದೆ ಎಂದೂ ಮನವಿಯಲ್ಲಿ ಎಚ್ಚರಿಸಲಾಗಿದೆ.

ಈ ಸಂದರ್ಭದಲ್ಲಿ ಕರವೇ ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಪಾಂಗಾಳ, ಉಪಾಧ್ಯಕ್ಷೆ ದೇವಕಿ ಬಾರ್ಕೂರ್, ಜಿಲ್ಲಾ ಕಾರ್ಯದರ್ಶಿ ಸಿದ್ದಣ್ಣ ಎಸ್. ಪೂಜಾರಿ, ಸಹ ಸಂಘಟನಾ ಕಾರ್ಯದರ್ಶಿ ಗಣೇಶ್ ಎಸ್., ಸಂಘಟನಾ ಕಾರ್ಯದರ್ಶಿಗಳಾದ ಗೋಪಾಲ್ ದೊರೈ ಹಾಗೂ ಅಲ್ಫೋನ್ಸ್, ಸಾಂಸ್ಕೃತಿಕ ಕಾರ್ಯದರ್ಶಿ ಕೃಷ್ಣಕುಮಾರ್, ಜಿಲ್ಲಾ ಸದಸ್ಯರಾದ ದೇವರಾಜ್ ದೊರೈ, ಅಶೋಕ್ ರಾವ್ ಮುಂತಾದವರು ಉಪಸ್ಥಿತರಿದ್ದರು.