ಪ್ರತ್ಯೇಕ ಜಿಲ್ಲೆಯಾಗಿದ್ದರಿಂದ ಉಡುಪಿ ಅಭಿವೃದ್ಧಿಯಾಗಿದೆ: ಜೆ.ಪಿ. ಹೆಗ್ಡೆ

| Published : Mar 29 2024, 12:52 AM IST

ಪ್ರತ್ಯೇಕ ಜಿಲ್ಲೆಯಾಗಿದ್ದರಿಂದ ಉಡುಪಿ ಅಭಿವೃದ್ಧಿಯಾಗಿದೆ: ಜೆ.ಪಿ. ಹೆಗ್ಡೆ
Share this Article
  • FB
  • TW
  • Linkdin
  • Email

ಸಾರಾಂಶ

ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಂಸದ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಗೌರವಿಸಲಾಯಿತು. ಬೇರೆ ಪಕ್ಷದಿಂದ ಬಂದ ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ನೇತೃತ್ವದಲ್ಲಿ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆಯು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಈ ಸಭೆಯಲ್ಲಿ ಉಪಸ್ಥಿತರಿದ್ದ ಮಾಜಿ ಸಂಸದ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರನ್ನು ಗೌರವಿಸಲಾಯಿತು.

ಇದೇ ಸಂದರ್ಭ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್, ಬೇರೆ ಪಕ್ಷದಿಂದ ಬಂದ ಮನೋಜ್ ಕರ್ಕೇರ ಅವರಿಗೆ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಿದರು.

ಈ ಸಂದರ್ಭ ಮಾತನಾಡಿದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ, ತಾನು ರಾಜ್ಯ ಸರ್ಕಾರದ ಸಚಿವನಾಗಿದ್ದಾಗ ಪ್ರತ್ಯೇಕ ಉಡುಪಿ ಜಿಲ್ಲೆ ರಚನೆಗೆ ಕಾರಣನಾಗಿದ್ದೇನೆ. ಉಡುಪಿ ಜಿಲ್ಲೆಯಾಗಿದ್ದರಿಂದ ಇಂದು ಇಷ್ಟು ಅಭಿವೃದ್ಧಿಯಾಗಿದೆ. ಮೀನುಗಾರರಿಗೆ ಡಿಸೇಲ್ ಸಬ್ಸಿಡಿ ದೊರಕಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಅಡಕೆ ಬೆಳೆಗಾರರಿಗೆ ಗೋರಖ್‌ನಾಥ್ ಸಮಿತಿ ರಚಿಸಿ ಅಡಕೆ ಬೆಳೆಗೆ ಉತ್ತಮ ಬೆಲೆ ದೊರಕಲು ಶ್ರಮಿಸಿದ್ದೇನೆ ಎಂದರಲ್ಲದೇ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿದರೇ ಗೆಲುವು ಖಚಿತ ಎಂದರು.ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್, ವಕ್ತಾರ ಸುಧೀರ್ ಕುಮಾರ್ ಮುರೊಳಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಲೆ, ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಪಕ್ಷದ ನಾಯಕರಾದ ದಿನೇಶ್ ಪುತ್ರನ್, ಉಡುಪಿ ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೈ ಸುಕುಮಾರ್, ನಾಯಕರಾದ ಕೃಷ್ಣಮೂರ್ತಿ ಆಚಾರ್ಯ, ಪ್ರಸಾದ್‌ರಾಜ್ ಕಾಂಚನ್, ಹರೀಶ್ ಕಿಣಿ, ಪ್ರಖ್ಯಾತ್ ಶೆಟ್ಟಿ, ಸುರೇಶ್ ಶೆಟ್ಟಿ ಬನ್ನಂಜೆ, ಪ್ರವೀಣ್ ಜಿ ಕೊಡವೂರು ಮುಂತಾದವರು ಭಾಗವಹಿಸಿದರು‌.