ಉಡುಪಿ: ಸರಸ್ವತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಕಾರ ಪುಸ್ತಕ ವಿತರಣೆ

| Published : Sep 05 2025, 01:01 AM IST

ಸಾರಾಂಶ

ಸಂಸ್ಕಾರ ನೋಟ್ ಪುಸ್ತಕಗಳ ಮುಖಪುಟ ಹಾಗೂ ಹಿಂಬದಿಯ ಪುಟದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಷ್ಟ್ರ ಪುರುಷರ, ಒಳ್ಳೆಯ ರಾಜ್ಯಾಡಳಿತ ನಡೆಸಿ ಪ್ರಜೆಗಳ ಹಿತಕ್ಕಾಗಿಯೇ ದುಡಿದ ರಾಜ ಮಹಾರಾಜರ ಆದರ್ಶಗಳು, ಒಳಗಿನ ಪುಟದಲ್ಲಿ ಸುಸಂಸ್ಕಾರ, ನೈತಿಕತೆಯ ಬಗ್ಗೆ ವಿಷಯ ಒಳಗೊಂಡಿರುತ್ತದೆ. ಅದನ್ನು ಓದಿ ತಿಳಿದುಕೊಂಡು ಜೀವನದಲ್ಲಿ ಆಳವಡಿಸಿಕೊಂಡರೆ ಮಕ್ಕಳು ‘ಆದರ್ಶ ವಿದ್ಯಾರ್ಥಿ’ಯಾಗಿ ರೂಪುಗೊಳ್ಳುವುದರಲ್ಲಿ ಸಂದೇಹವಿಲ್ಲ. ಇದರಿಂದ ಮುಂದೆ ಅವರು ‘ಆದರ್ಶ ರಾಷ್ಟ್ರ’ ಕಟ್ಟಲು ಸಾಧ್ಯವಾಗುವುದು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬುಧವಾರ ಉಡುಪಿ ನಗರದ ಸರಸ್ವತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ 25 ವಿದ್ಯಾರ್ಥಿಗಳಿಗೆ ಉಚಿತವಾಗಿ ಸಂಸ್ಕಾರ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.ಸಂಸ್ಕಾರ ನೋಟ್ ಪುಸ್ತಕಗಳ ಮುಖಪುಟ ಹಾಗೂ ಹಿಂಬದಿಯ ಪುಟದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ರಾಷ್ಟ್ರ ಪುರುಷರ, ಒಳ್ಳೆಯ ರಾಜ್ಯಾಡಳಿತ ನಡೆಸಿ ಪ್ರಜೆಗಳ ಹಿತಕ್ಕಾಗಿಯೇ ದುಡಿದ ರಾಜ ಮಹಾರಾಜರ ಆದರ್ಶಗಳು, ಒಳಗಿನ ಪುಟದಲ್ಲಿ ಸುಸಂಸ್ಕಾರ, ನೈತಿಕತೆಯ ಬಗ್ಗೆ ವಿಷಯ ಒಳಗೊಂಡಿರುತ್ತದೆ. ಅದನ್ನು ಓದಿ ತಿಳಿದುಕೊಂಡು ಜೀವನದಲ್ಲಿ ಆಳವಡಿಸಿಕೊಂಡರೆ ಮಕ್ಕಳು ‘ಆದರ್ಶ ವಿದ್ಯಾರ್ಥಿ’ಯಾಗಿ ರೂಪುಗೊಳ್ಳುವುದರಲ್ಲಿ ಸಂದೇಹವಿಲ್ಲ. ಇದರಿಂದ ಮುಂದೆ ಅವರು ‘ಆದರ್ಶ ರಾಷ್ಟ್ರ’ ಕಟ್ಟಲು ಸಾಧ್ಯವಾಗುವುದು ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಯಿತು.ಈ ಸಂದರ್ಭ ಸಂಸ್ಥೆಯ ಕಾರ್ಯಕರ್ತರಾದ ರತ್ನಾ ಮೂಲ್ಯ, ಗೀತಾ ಆಚಾರ್ಯ ಹಾಗೂಪ್ರಜ್ಞಾ ರಾವ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿಲತಾ, ಶಾಲಾ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.