ಉಡುಪಿ ಜಿಲ್ಲೆ: ಮತದಾರರ ಪಟ್ಟಿಗೆ 5286 ಯುವ ಮತದಾರರ ಸೇರ್ಪಡೆ

| Published : Jan 07 2025, 12:33 AM IST

ಸಾರಾಂಶ

ಉಡುಪಿ ಜಿಲ್ಲೆಯ ಪರಿಷ್ಕೃತ, ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು, ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 10,61,289 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

5,12,232 ಪುರುಷರು, 5,49,046 ಮಹಿಳೆಯರು, 11 ತೃತೀಯಲಿಂಗಿಗಳು, ಒಟ್ಟು 10,61,289 ಮತದಾರರು

ಕನ್ನಡಪ್ರಭ ವಾರ್ತೆ ಮಣಿಪಾಲಉಡುಪಿ ಜಿಲ್ಲೆಯ ಪರಿಷ್ಕೃತ, ಅಂತಿಮ ಮತದಾರರ ಪಟ್ಟಿಯನ್ನು ತಯಾರಿಸಲಾಗಿದ್ದು, ಜಿಲ್ಲೆಯಲ್ಲಿ 5,12,232 ಪುರುಷರು, 5,49,046 ಮಹಿಳೆಯರು ಹಾಗೂ 11 ಜನ ತೃತೀಯ ಲಿಂಗಿಗಳು ಸೇರಿದಂತೆ ಒಟ್ಟು 10,61,289 ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.ಅವರು ಸೋಮವಾರ ಇಲ್ಲಿನ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿ ಮಾತನಾಡಿದರು.ಪರಿಷ್ಕೃತ ಮತದಾರರ ಪಟ್ಟಿಯಂತೆ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 1,17,890 ಪುರುಷರು, 1,22,914 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿ ಒಟ್ಟು 2,40,806 ಮತದಾರರು, ಕುಂದಾಪುರ ಕ್ಷೇತ್ರದಲ್ಲಿ 1,01,959 ಪುರುಷರು, 1,10,025 ಮಹಿಳೆಯರು ಹಾಗೂ 2 ತೃತೀಯ ಲಿಂಗಿಗಳು ಸೇರಿ ಒಟ್ಟು 2,11,986 ಮತದಾರರು, ಉಡುಪಿ ಕ್ಷೇತ್ರದಲ್ಲಿ 1,06,782 ಪುರುಷರು, 1,14,839 ಮಹಿಳೆಯರು ಹಾಗೂ 3 ತೃತೀಯ ಲಿಂಗಿಗಳು ಸೇರಿ ಒಟ್ಟು 2,21,624, ಕಾಪು ಕ್ಷೇತ್ರದಲ್ಲಿ 92,598 ಪುರುಷರು, 1,00583 ಮಹಿಳೆಯರು ಹಾಗೂ 4 ತೃತೀಯ ಲಿಂಗಿಗಳು ಸೇರಿ ಒಟ್ಟು 1,93,185 ಮತ್ತು ಕಾರ್ಕಳ ಕ್ಷೇತ್ರದಲ್ಲಿ 93,003 ಪುರುಷರು, 1,00,685 ಮಹಿಳೆಯರು ಸೇರಿ ಒಟ್ಟು 1,93,688 ಮತದಾರರಿದ್ದಾರೆ ಎಂದರು.

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಒಟ್ಟು 5287 ಯುವಜನರು ಸೇರ್ಪಡೆಗೆ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 1 ಅರ್ಜಿ ತಿರಸ್ಕೃತವಾಗಿದ್ದು, 5286 ಮಂದಿ ಸೇರ್ಪಡೆಯಾಗಿದ್ದಾರೆ. 5499 ಮತದಾರರ ಹೆಸರನ್ನು ತಿದ್ದುಪಡಿ ಮಾಡಲಾಗಿದೆ ಮತ್ತು 7398 ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಡಿಸಿ ತಿಳಿಸಿದರು.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಮಾಹಿತಿಯನ್ನು ಸಾರ್ವಜನಿಕರು ಪಡೆಯಲು ಅನುಕೂಲವಾಗುವಂತೆ ವೋಟರ್ ಹೆಲ್ಪ್ಲೈನ್ ನಂಬರ್ 1950ರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದರು. ಇದೇ ಸಂದರ್ಭದಲ್ಲಿ ಜಿಲ್ಲೆಯ ಕರಡು ಮತದಾರರ ಪಟ್ಟಿ ಹಾಗೂ ಅವುಗಳ ಸಿ.ಡಿ. ಪ್ರತಿಗಳನ್ನು ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ವಿತರಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್., ವಾರ್ತಾಧಿಕಾರಿ ಮಂಜುನಾಥ್ ಬಿ., ಬಿಜೆಪಿಯ ಚಂದ್ರಶೇಖರ ಪ್ರಭು, ಕಾಂಗ್ರೇಸ್ನ ಹಬೀಬ್ ಅಲಿ, ಜೆ.ಡಿ.ಎಸ್.ನ ಜಯರಾಂ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.