ಸುವರ್ಣಮಹೋತ್ಸವ ವರ್ಷ-2026, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭ ಬುಧವಾರ ನಾಗೂರು ಕೃಷ್ಣಲಲಿತಾ ಕಲಾಮಂದಿರದಲ್ಲಿ ನಡೆಯಿತು.
ಬೈಂದೂರು: ಸುವರ್ಣಮಹೋತ್ಸವ ವರ್ಷ-2026, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಗಳ ಸಂಯುಕ್ತ ಆಶ್ರಯದಲ್ಲಿ 73ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವ ಧನ ವಿತರಣಾ ಸಮಾರಂಭ ಬುಧವಾರ ನಾಗೂರು ಕೃಷ್ಣಲಲಿತಾ ಕಲಾಮಂದಿರದಲ್ಲಿ ನಡೆಯಿತು.
ದಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟ ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮೀಣ ಜನರ ಒಡನಾಡಿಯಾಗಿ, ಆರ್ಥಿಕ ಚೈತನ್ಯಕ್ಕೆ ಕಾರಣವಾದ ಸಹಕಾರ ಕ್ಷೇತ್ರ ಇಂದು ಗ್ರಾಮೀಣ ಜನತೆಯ ಬೆನ್ನೆಲುಬಾಗಿ ನಿಂತಿದೆ. ಪ್ರತಿ ಗ್ರಾಮ ಗ್ರಾಮಗಳಲ್ಲಿ ಹುಟ್ಟಿಕೊಂಡ ಸಹಕಾರ ಸಂಘಗಳು ನಿಜ ಅರ್ಥದಲ್ಲಿ ಗ್ರಾಮೀಣ ಬದುಕಿನ ಜೀವನಾಡಿಗಳು ಎಂದರು.ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಸಾಧಕರನ್ನು ಸನ್ಮಾನಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ನಿರ್ದೇಶಕ ಮೊಳಹಳ್ಳಿ ಮಹೇಶ ಹೆಗ್ಡೆ ಶಿಕ್ಷಕರಿಗೆ ಗೌರವಧನ ವಿತರಿಸಿದರು.
ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಬೆಳ್ವೆ ಸಹಕಾರಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಹಾಗೂ ಪಡುಬಿದ್ರಿ ಸಹಕಾರಿ ಸಂಘದ ವೈ. ಸುಧೀರ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು.ಖಂಬದಕೋಣೆ ರೈ. ಸೇ. ಸ. ಸಂಘದ ಅಧ್ಯಕ್ಷ ಸಹಕಾರರತ್ನ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿ, ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಆರ್ಥಿಕತೆ ಮತ್ತು ಅಭಿವೃದ್ಧಿಯನ್ನು ಬಲಪಡಿಸುವುದು, ಸ್ವಾವಲಂಬನೆ ಸಾಧಿಸುವುದು ಹಾಗೂ ರೈತರು, ಮಹಿಳಾ ಸ್ವಸಹಾಯ ಗುಂಪುಗಳ ಮತ್ತು ಯುವಕರನ್ನು ಸಬಲೀಕರಣಗೊಳಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.
ಡಾ. ಶಿವರಾಮ ಕಾರಂತ ಟ್ರಸ್ಟ್ನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ, ಜಿಲ್ಲಾ ಸಂಘದ ಸಿಇಒ ಅನೂಷಾ, ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ ಕುಮಾರ್, ಮಂಗಳೂರು ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ನಿರ್ದೇಶಕ ಎಂ. ಮಹೇಶ ಹೆಗ್ಡೆ, ಸಂಘದ ಉಪಾಧ್ಯಕ್ಷ ಮಂಜು ದೇವಾಡಿಗ, ನಿರ್ದೇಶಕರುಗಳಾದ ಮೋಹನ ಪೂಜಾರಿ, ಗುರುರಾಜ ಹೆಬ್ಬಾರ್, ಭರತ ದೇವಾಡಿಗ, ಹೂವ ನಾಯ್ಕ, ಪ್ರಕಾಶ ಎನ್. ಪೂಜಾರಿ, ರಾಜೇಶ ದೇವಾಡಿಗ, ಉದಯಕುಮಾರ್ ಶೆಟ್ಟಿ, ದಿನೀತಾ ಶೆಟ್ಟಿ, ಲೀಲಾ ಪೂಜಾರಿ, ರಂಜಿತಕುಮಾರ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಂಘದ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತಾನಾಡಿದರು. ಸುಬ್ರಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು. ಸಂಘದ ಸಿಇಓ ವಿಷ್ಣು ಆರ್ ಪೈ ಸನ್ಮಾನಿತರ ಪಟ್ಟಿವಾಚಿಸಿದರು. ಹಿರಿಯ ವ್ಯವಸ್ಥಾಪಕ ಚಂದ್ರಯ್ಯ ಶೆಟ್ಟಿ ವಂದಿಸಿದರು.