ಸಾರಾಂಶ
ಭಾರತದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ 34ನೇ ಪುಣ್ಯತಿಥಿಯ ಅಂಗವಾಗಿ ಬುಧವಾರ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಂಸ್ಮರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕನ್ನಡಪ್ರಭ ವಾರ್ತೆ ಉಡುಪಿ
ಭಾರತದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ 34ನೇ ಪುಣ್ಯತಿಥಿಯ ಅಂಗವಾಗಿ ಬುಧವಾರ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಸಹಯೋಗದಲ್ಲಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಸಂಸ್ಮರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಕಾರ್ಯಕ್ರಮ ಉದ್ಘಾಟಿದರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಎಂ.ಎ ಗಫೂರ್, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ಪಕ್ಷದ ನಾಯಕರಾದ ಮುರಳಿ ಶೆಟ್ಟಿ, ಮಹಾಬಲ ಕುಂದರ್, ನೀರೆ ಕೃಷ್ಣ ಶೆಟ್ಟಿ, ನಾಗೇಶ್ ಕುಮಾರ್ ಉದ್ಯಾವರ, ಫಾ. ವಿಲಿಯಮ್ ಮಾರ್ಟಿಸ್, ಅಣ್ಣಯ್ಯ ಶೇರಿಗಾರ್, ರೋಶನ್ ಶೆಟ್ಟಿ, ಲಕ್ಷ್ಮಣ್ ಪೂಜಾರಿ, ಹರಿಪ್ರಸಾದ್ ರೈ, ಅಮೃತ್ ಶೆಣೈ, ಸತೀಶ್ ಕೊಡವೂರು, ಶ್ರೀಧರ್ ಶೇಟ್, ವಿಲ್ಸನ್ ಸಿಕ್ವೇರಾ, ಸುರೇಂದ್ರ ಆಚಾರ್ಯ, ಯಾದವ್ ಅಮೀನ್, ಸಂಜಯ್ ಆಚಾರ್ಯ ಮತ್ತಿತರರು ಹಾಜರಿದ್ದರು.ದಿ. ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಅವರ ಕೊಡುಗೆಯನ್ನು ಸ್ಮರಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷ ಎಂ ಎ ಗಫೂರ್ ಅವರು ದಿ. ರಾಜೀವ್ ಗಾಂಧಿ ಅವರ ಭಾರತಕ್ಕೆ ನೀಡಿದ ಕೊಡುಗೆ ಹಾಗೂ ಅವರ ತ್ಯಾಗವನ್ನು ಸ್ಮರಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಂಜಯ್ ಆಚಾರ್ಯ ವಂದಿಸಿದರು.