ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಸಮಾರಂಭ ಮಣಿಪಾಲ ವಿದ್ಯಾನಗರದ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಕಾರ್ಕಳ: ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ (ಕುಪ್ಮಾ) ಉಡುಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಸಮಾರಂಭ ಮಣಿಪಾಲ ವಿದ್ಯಾನಗರದ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.ಕುಂದಾಪುರದ ಸೆಂಟ್ ಮೇರೀಸ್ ಕಾಂಪೋಸಿಟ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ರೇಶ್ಮಾ ಫೆರ್ನಾಂಡೀಸ್, ಸುಣ್ಣಾರಿಯ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸ್ಮಿತಾ ಪದ್ಮಜಾ, ಕಾರ್ಕಳದ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಸೌಜನ್ಯಾ ಹೆಗ್ಡೆ, ಉಡುಪಿಯ ವಿದ್ಯೋದಯ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಶಕುಂತಲಾ ಪಾಲನ್ ಮತ್ತು ಕುಂದಾಪುರದ ವೆಂಕಟರಮಣ ಶಿಕ್ಷಣ ಸಂಸ್ಥೆಯ ಉಪನ್ಯಾಸಕಿ ಲತಾ ಪೈ ಅವರಿಗೆ ಕುಪ್ಮಾ ಉತ್ತಮ ಉಪನ್ಯಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು
ಕರ್ನಾಟಕ ರಾಜ್ಯ ಕುಪ್ಮಾ ಕಾರ್ಯದರ್ಶಿ ಪ್ರೊ. ನರೇಂದ್ರ ಎಲ್. ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ರಾಜ್ಯ ಗೌರವಾಧ್ಯಕ್ಷ ಡಾ. ಕೆ. ಸಿ. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು.ಗೌರವಾಧ್ಯಕ್ಷ ಕೆ. ರಾಧಾಕೃಷ್ಣ ಶೆಣೈ, ಉಪಾಧ್ಯಕ್ಷ ಡಾ. ಸುಧಾಕರ್ ಶೆಟ್ಟಿ, ಮಂಗಳೂರು ಜಿಲ್ಲಾ ಕುಪ್ಮಾ ಕಾರ್ಯದರ್ಶಿ ಡಾ. ಮಂಜುನಾಥ್ ಎಸ್. ರೇವಣ್ಕರ್ ಉಪಸ್ಥಿತರಿದ್ದರು.
ಕುಪ್ಮಾ ಉಡುಪಿ ಜಿಲ್ಲಾ ಅಧ್ಯಕ್ಷ ಸಿಎ ಗೋಪಾಲಕೃಷ್ಣ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಜಿಲ್ಲಾ ಸಮಿತಿ ಕಾರ್ಯದರ್ಶಿ ಅಶ್ವತ್ ಎಸ್. ಎಲ್ ವಂದಿಸಿದರು.ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಸಂಗೀತ ನಿರೂಪಿಸಿದರು.