ಸಾರಾಂಶ
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025 ಇದರ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ನಗರದ ಅಜ್ಜರಕಾಡು ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2025 ಇದರ ಸಮಾರೋಪ ಸಮಾರಂಭ ಶುಕ್ರವಾರ ಸಂಜೆ ನಗರದ ಅಜ್ಜರಕಾಡು ಜಿಲ್ಲಾ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಮಂಗಳೂರು ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸುಧಾಕರ್ ನಾಯಕ್ ಮತ್ತು ಹರ್ಷ ಪ್ರಿಯಂವದಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ರೀಡಾಕೂಟದಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಒಟ್ಟು ಐದು ತಂಡಗಳಾಗಿ ಭಾಗವಹಿಸಿದ್ದು, ಉಡುಪಿ ಡಿಆರ್ ತಂಡ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿತು. ಪುರುಷರ ವಿಭಾಗದಲ್ಲಿ ಡಿಎಆರ್ ತಂಡ ಜೀವನ್ ಹಾಗೂ ಮಹಿಳೆಯರ ವಿಭಾಗದಲ್ಲಿ ಉಡುಪಿ ಉಪ ವಿಭಾಗದ ನಾಗಶ್ರೀ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿಯನ್ನು ಪಡೆದುಕೊಂಡರು.