ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಜಿಲ್ಲೆ ಲಿಂಗಾನುಪಾತದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿದೆ. ಜಿಲ್ಲೆಯ ಆಡಳಿತದಲ್ಲಿ ಅನೇಕ ಮಹಿಳಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸಂಸದರೂ, ಪೊಲೀಸ್ ವರಿಷ್ಠಾಧಿಕಾರಿ, ಜಿಪಂ ಹಾಗೂ ತಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಮೂಲಕ ಜಿಲ್ಲೆಯ ಪ್ರಗತಿ ಕೊಡುಗೆ ನೀಡಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ
ಉಡುಪಿ: ಉಡುಪಿ ಜಿಲ್ಲೆಯ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದ್ದು, ಜಿಲ್ಲೆ ಲಿಂಗಾನುಪಾತದಲ್ಲಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನಿಯಾಗಿದೆ. ಜಿಲ್ಲೆಯ ಆಡಳಿತದಲ್ಲಿ ಅನೇಕ ಮಹಿಳಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಸಂಸದರೂ, ಪೊಲೀಸ್ ವರಿಷ್ಠಾಧಿಕಾರಿ, ಜಿಪಂ ಹಾಗೂ ತಾಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಮೂಲಕ ಜಿಲ್ಲೆಯ ಪ್ರಗತಿ ಕೊಡುಗೆ ನೀಡಿದ್ದಾರೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಉಡುಪಿ ನಗರ ಬಿಜೆಪಿ ಹಾಗೂ ಮಹಿಳಾ ಮೋರ್ಚಾದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಮಹಿಳಾ ಮೋರ್ಚಾ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕ ಮಹಿಳೆಯರು ಹಾಗೂ ಸಮಾಜ ಸೇವಕರನ್ನು ಗುರುತಿಸುವ ಮೂಲಕ ಅರ್ಥಪೂರ್ಣವಾಗಿ ಮಹಿಳಾ ದಿನಾಚರಣೆ ಆಚರಿಸುತ್ತಿರುವುದು ಅಭಿನಂದನಾರ್ಹ ಎಂದರು.ಶಕುಂತಲಾ ಶೆಟ್ಟಿ (ಹೈನುಗಾರಿಕೆ ), ವಿಮಲ (ಸಂಜೀವಿನಿ ಗ್ರೂಪ್), ಅನುಷಾ (ವಕೀಲರು), ಸುಶೀಲ ಸಾಲಿಯಾನ್ (ಮಹಿಳಾ ಹೋಮ್ ಗಾರ್ಡ್), ಗೀತಾ ಕೃಷ್ಣರಾಜ್ (ಆಟೋ ಚಾಲಕಿ), ಲಲಿತ (ಪೌರ ಕಾರ್ಮಿಕರು) ಹಾಗೂ ಸಮಾಜ ಸೇವಕರಾದ ನಿತ್ಯಾನಂದ ಒಳಕಾಡು, ವಿಶು ಶೆಟ್ಟಿ ಅಂಬಲಪಾಡಿ, ಸತೀಶ್ ಸಾಲ್ಯಾನ್ ಮಣಿಪಾಲ ಹಾಗೂ ಪರ್ಕಳದ ಮನೆ ಊಟ ಹೋಟೆಲ್ ನ ಹಿರಿಯ ದಂಪತಿಗಳಾದ ಗೋಪಾಲಕೃಷ್ಣ ಮತ್ತು ವಸಂತಿ ದಂಪತಿಗಳನ್ನು ವಿಶೇಷವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.ಸ್ತ್ರೀರೋಗ ತಜ್ಞೆ ಡಾ. ರಾಜಲಕ್ಷ್ಮಿ ಮಹಿಳೆಯರ ಆರೋಗ್ಯ ಮಾಹಿತಿ ನೀಡಿದರು. ಮಹಿಳೆಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮೋರ್ಚಾದ ಅಧ್ಯಕ್ಷೆ ನೀತಾಪ್ರಭು ಸ್ವಾಗತಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ , ಪಕ್ಷದ ಮುಖಂಡ ಕಿದಿಯೂರು ಉದಯ ಕುಮಾರ್ ಶೆಟ್ಟಿ, ನಗರ ಮಂಡಲದ ಅಧ್ಯಕ್ಷ ದಿನೇಶ್ ಅಮಿನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಸಂಧ್ಯಾ ರಮೇಶ್, ನಗರ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಾಂತಿ ಮನೋಜ್ ಮತ್ತಿತರರಿದ್ದರು.