ಉಡುಪಿ: ಎಸ್‌ಡಿಎಂಎ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

| Published : Jul 13 2025, 01:18 AM IST

ಸಾರಾಂಶ

ಉಡುಪಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವಿಶ್ವ ವೈದ್ಯರ ದಿನವನ್ನು ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವಿಶ್ವ ವೈದ್ಯರ ದಿನವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಮಣಿಪಾಲ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮಾತನಾಡಿ, ವೈದ್ಯಕೀಯ ವೃತ್ತಿಯ ಒಳನೋಟಗಳು, ವೈದ್ಯರು ಎದುರಿಸುತ್ತಿರುವ ಸವಾಲುಗಳು ಮತ್ತು ಅವರ ಕೆಲಸವನ್ನು ನಡೆಸುವ ಆಳವಾದ ಅಧ್ಯಯನವನ್ನು ವೈದ್ಯರ ಭಾವನಾತ್ಮಕ ಹೋರಾಟಗಳನ್ನು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಮಮತಾ ಕೆ.ವಿ., ವೈದ್ಯರು ಸಮಾಜಕ್ಕೆ ನೀಡುತ್ತಿರುವ ಉತ್ತಮ ಸೇವೆ ಸದಾ ಆದರಣೀಯ. ಕೆಲಸದ ಸ್ಥಳದಲ್ಲಿ ಒತ್ತಡ ನಿವಾರಣೆಯ ಬಗ್ಗೆ ವಿವರಿಸಿ ರೋಗಿಗಳಿಗೆ ಉತ್ತಮ ಚಿಕಿತ್ಸೆಯನ್ನು ನೀಡುವ ಬಗ್ಗೆ ವೈದ್ಯರಿಗೆ ಸಲಹೆ ನೀಡಿದರು. ಅಲ್ಲದೇ ವೃತ್ತಿಪರತೆಯ ಜೊತೆಗೆ ರೋಗಿಯೊಡನೆ ಆತ್ಮೀಯತೆಯನ್ನು ಬೆಳೆಸುವ ಬಗ್ಗೆ ಹೆಚ್ಚು ಗಮನ ನೀಡಬೇಕು ಎಂದು ಹೇಳಿ ಸಂಸ್ಥೆಯ ವೈದ್ಯರೆಲ್ಲರಿಗೂ ಶುಭ ಹಾರೈಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ನಾಗಾರಾಜ ಎಸ್., ವೈದ್ಯರಾದವರು ಬೌದ್ಧಿಕವಾಗಿ ಸದೃಢರಾಗಿ ಸಮಾಜಕ್ಕೆ ಕೊಡಬೇಕಾದ ಸೇವೆಯನ್ನು ನಿರಂತರವಾಗಿ ಯಾವುದೇ ಅಪೇಕ್ಷೆಗಳಿಲ್ಲದೆ ಮಾಡಬೇಕು ಎಂದು ತಿಳಿಸಿದರು.ಕಾಲೇಜಿನ ಆಂತರಿಕ ವ್ಯವಹಾರ ಸಮಿತಿಯ ಡೀನ್ ಡಾ. ವಿಜಯ್ ಬಿ. ನೆಗಳೂರ್, ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ಮುಖ್ಯಸ್ಥ ಡಾ. ರಾಕೇಶ್ ಆರ್.ಎನ್‌. ಉಪಸ್ಥಿತರಿದ್ದರು.