ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿನಾಗರಿಕ ಸಮಾಜ ಪ್ರಶ್ನೆ ಮಾಡದಿದ್ದರೆ ಸರ್ಕಾರ ಯಾವುದೇ ಸಮಸ್ಯೆಗೆ ಸ್ಪಂದಿಸುವುದಿಲ್ಲ. ಜನಪ್ರತಿನಿಧಿಗಳು ಕೆಲಸ ಮಾಡದೇ ಇದ್ದಾಗ ಹೋರಾಟ ಮಾಡುವುದು ನಮ್ಮ ಕರ್ತವ್ಯ. ಅವರು ಜನಸೇವಕರೇ ಹೊರತು ನಾಯಕರಲ್ಲ. ಉತ್ತಮ ಶಿಕ್ಷಣ ಮತ್ತು ಸಂಪೂರ್ಣ ಆರೋಗ್ಯವನ್ನು ಸರ್ಕಾರ ನಮಗೆ ನೀಡಬೇಕು. ಆದರೆ ಅದು ಇಂದಿಗೂ ಸಾಧ್ಯವಾಗಿಲ್ಲ ಎಂದು ಖ್ಯಾತ ಮನೋವೈದ್ಯ, ಸಾಮಾಜಿಕ ಹೋರಾಟಗಾರ ಡಾ.ಪಿ.ವಿ.ಭಂಡಾರಿ ವಿಷಾದಿಸಿದರು.ಅವರು ಉಡುಪಿ- ದ.ಕ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಉಡುಪಿ ತಾಲೂಕು ಕಸಾಪಗಳ ವತಿಯಿಂದ ಸಂಗೊಳ್ಳಿ ರಾಯಣ್ಣ ಪುರಸ್ಕಾರವನ್ನು ಸ್ವೀಕರಿಸಿ ಮಾತನಾಡಿದರು.ಈ ಕಾರ್ಯಕ್ರಮವನ್ನು ಉಡುಪಿ ಆದರ್ಶ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬಳಗದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ ವಹಿಸಿದ್ದರು.ಉಡುಪಿಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ಕರ್ನಾಟಕ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷ ಸುರೇಶ್ ಗೋಕಾಕ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಬಳಗದ ಕಾರ್ಯಾಧ್ಯಕ್ಷ ಕುಮಾರ್ ಪ್ರಸಾದ್, ಉಡುಪಿ ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘದ ಅಧ್ಯಕ್ಷ ಹುನಮಂತ ಎಸ್.ಡೊಳ್ಳಿನ ಉಪಸ್ಥಿತರಿದ್ದರು. ಅವಿನಾಶ್ ಕಾಮತ್ ಅಭಿನಂದನಾ ಮಾತುಗಳನ್ನಾಡಿದರು. ಕಸಾಪ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಪ್ರಾಸ್ತಾವಿಕವಾಗಿ ಮಾತನಾಡಿದರು. ಬಳಗದ ಗೌರವಾಧ್ಯಕ್ಷ ಜನಾರ್ದನ ಕೊಡವೂರು ಸ್ವಾಗತಿಸಿದರು. ರಾಜೇಶ್ ಭಟ್ ಪಣಿಯಾಡಿ ವಂದಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು.
ಕಾರ್ಯಕ್ರಮಕ್ಕೆ ಮೊದಲು ಗಣೇಶ್ ಗಂಗೊಳ್ಳಿ ಮತ್ತು ತಂಡದಿಂದ ಕ್ರಾಂತಿ ಗೀತೆಗಳು ಸಂಪನ್ನಗೊಂಡವು.