ಉಡುಪಿ: ಕೇಶವ ಪ್ರಶಸ್ತಿಗೆ ಡಾ. ರಮಾನಂದ ಬನಾರಿ ಆಯ್ಕೆ

| Published : Oct 07 2025, 01:03 AM IST

ಉಡುಪಿ: ಕೇಶವ ಪ್ರಶಸ್ತಿಗೆ ಡಾ. ರಮಾನಂದ ಬನಾರಿ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಶಸ್ತಿ ಪ್ರದಾನ ಸಮಾರಂಭ ಅ.18ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಪ್ರಶಸ್ತಿಯು 25 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ವತಿಯಿಂದ ನೀಡಲಾಗುವ 2025ನೇ ಸಾಲಿನ ಕೇಶವ ಪ್ರಶಸ್ತಿಗೆ ಹಿರಿಯ ಸಾಹಿತಿ ಡಾ. ರಮಾನಂದ ಬನಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಅ.18ರಂದು ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಪ್ರಶಸ್ತಿಯು 25 ಸಾವಿರ ರು. ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ ಎಂದು ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ತಿಳಿಸಿದ್ದಾರೆ.ಡಾ. ಬನಾರಿ ಅವರು ವೃತ್ತಿಯಿಂದ ವೈದ್ಯರಾಗಿದ್ದು, ಪ್ರವೃತ್ತಿಯಿಂದ ಬರಹಗಾರರು ಮತ್ತು ತಾಳಮದ್ದಳೆ ಅರ್ಥಧಾರಿಯಾಗಿ ಖ್ಯಾತರಾಗಿದ್ದಾರೆ. ಕಲ್ಲಿಕೋಟೆ ವೈದ್ಯಕೀಯ ಮಹಾವಿದ್ಯಾಲಯದಿಂದ ಎಂಬಿಬಿಎಸ್ ಪದವಿ ಪಡೆದ ಅವರು ಸುಮಾರು ೨೦ಕ್ಕೂ ಹೆಚ್ಚು ಕೃತಿಗಳನ್ನು ಬರೆದಿದ್ದಾರೆ. ೧೦ಕ್ಕೂ ಹೆಚ್ಚು ಸಂಪಾದಿತ ಕೃತಿಗಳು ಪ್ರಕಟವಾಗಿವೆ.ಸಾಹಿತ್ಯ, ಯಕ್ಷಗಾನ, ಕಾಸರಗೋಡು ಕನ್ನಡಪರ ಹೋರಾಟ, ಭಾಷಣ, ಸಮಾಜಸೇವೆ ಹೀಗೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಲ್ಲದೆ ಹಲವಾರು ಸಂಘ ಸಂಸ್ಥೆಗಳಲ್ಲಿ ಅಧ್ಯಕ್ಷರಾಗಿ, ಸ್ಥಾಪಕಾಧ್ಯಕ್ಷರಾಗಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ, ಸಂಘಟಕರಾಗಿ ಕಾರ್ಯನಿರ್ವಹಿಸಿರುವ ಇವರು ಗುಲ್ಬರ್ಗಾ ಡಾ. ಎಸ್.ಪಿ. ಶಂಕರ್ ಪ್ರತಿಷ್ಠಾನದ ಶ್ರೇಷ್ಠ ವೈದ್ಯಕೀಯ ಸಾಹಿತ್ಯ ಪ್ರಶಸ್ತಿ, ಗೋವಿಂದ ಪೈ ಕಲಾ ಅಕಾಡೆಮಿ ಪ್ರಶಸ್ತಿ, ಶ್ರೇಷ್ಠ ಕುಟುಂಬ ವೈದ್ಯ ಪ್ರಶಸ್ತಿ, ಸುವರ್ಣ ಕರ್ನಾಟಕ ಕಾವ್ಯ ಪ್ರಶಸ್ತಿ, ಶೇಣಿ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಗೌರವ ಸಂಮಾನಗಳಿಗೆ ಭಾಜನರಾಗಿದ್ದಾರೆ.