ಉಡುಪಿ: ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ

| Published : Oct 21 2024, 12:45 AM IST

ಸಾರಾಂಶ

ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ನಡೆಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಒಬ್ಬ ವ್ಯಕ್ತಿಯೊಡನೆ ಮಾತನಾಡಿದಾಗ ಸಂಭಾಷಣೆ ಆರಂಭವಾದರೆ, ಸಮೂಹದೊಂದಿಗೆ ಮಾತನಾಡಿದಾಗ ಭಾಷಣದ ಆರಂಭವಾಗುತ್ತದೆ. ಭಾಷಣ ಕೂಡ ಸಂಪರ್ಕಕ್ಕಾಗಿ ಇರುವ ಮಾಧ್ಯಮ ಎಂದು ಉಡುಪಿ ಧರ್ಮಪ್ರಾಂತ್ಯದ ಭಾರತೀಯ ಕೆಥೊಲಿಕ ಯುವ ಸಂಚಾಲನದ ನಿರ್ದೇಶಕ ವಂ.ಸ್ಟೀವನ್ ಫರ್ನಾಂಡಿಸ್ ಅಭಿಪ್ರಾಯಪಟ್ಟರು.ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾ ಕೆಂದ್ರದಲ್ಲಿ ಕೆಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಆಯೋಜಿಸಿದ್ದ ಪರಿಣಾಮಕಾರಿ ಭಾಷಣ ಕಲೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಭಾಷಣವೆಂದರೆ ಕೇವಲ ಬರೀ ಮಾತುಗಳಾಗಿರದೇ, ನಮ್ಮ ನೈಜ ಭಾವನೆಗಳನ್ನು ಮತ್ತು ವಿಚಾರಗಳನ್ನು ಅಭಿವ್ಯಕ್ತಪಡಿಸುವ ಮಾಧ್ಯಮವಾಗಿದೆ. ಒಬ್ಬ ವ್ಯಕ್ತಿಯು ಸಮೂಹದ ಮುಂದೆ ತಾನು ವ್ಯಕ್ತಪಡಿಸುವ ಮಾತು ಯಾವ ರೀತಿಯಲ್ಲಿ ಇರಬೇಕು ಎನ್ನುವುದು ಕೂಡ ಮುಖ್ಯವಾಗಿರುತ್ತದೆ. ನಾವು ಆಡಿದ ಮಾತು ಇನ್ನೊಬ್ಬ ವ್ಯಕ್ತಿತ್ವಕ್ಕೆ ಧಕ್ಕೆಯಾಗದಂತೆ ಇರಬೇಕು. ಇಂತಹ ತರಬೇತಿ ಕಾರ್ಯಾಗಾರಗಳು ವಿದ್ಯಾರ್ಥಿಗಳಲ್ಲಿ ಪರಿಣಾಮಕಾರಿಯಾಗಿ ಭಾಷಣ ಮಾಡುವ ಕಲೆಯ ಕೌಶಲ್ಯವನ್ನು ಬೆಳೆಸಲು ಸಹಕಾರಿಯಾಗಿದೆ ಎಂದರು.ಜೆಸಿಐ ರಾಷ್ಟ್ರೀಯ ತರಬೇತುದಾರ ಬಾಸುಮ ಕೊಡಗು ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪರಿಣಾಮಕಾರಿ ಭಾಷಣ ಕಲೆ ಹಾಗೂ ವೈಯಕ್ತಿಕ ಬೆಳವಣಿಗೆ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ತಿಳಿ ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ವಹಿಸಿದ್ದರು.ಕಾರ್ಯಕ್ರಮದ ಸಂಚಾಲಕ ವಾಲ್ಟರ್ ಸಿರಿಲ್ ಪಿಂಟೊ, ಕೆಥೊಲಿಕ್ ಸಭಾ ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್ ಉಪಸ್ಥಿತರಿದ್ದರು.