ಸಾರಾಂಶ
ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿ ಕಾರ್ತಿಕ್ ಹೋಟೆಲ್ ಸಭಾಂಗಣದಲ್ಲಿ ಜಿಲ್ಲಾ ಬ್ಲಾಕ್ ಅಧ್ಯಕ್ಷರ ಸಭೆ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಲೋಕಸಭೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಯಶಸ್ವಿಯಾಗಿ ಎದುರಿಸಲು ಬೇಕಾದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು.ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಈ ಬಾರಿ ಕಾಂಗ್ರೆಸ್‌ಗೆ ಗೆಲ್ಲುವ ಪೂರ್ಣಅವಕಾಶ ಇದೆ. ಮೊನ್ನೆ ತಾನೇ ಮಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕರ್ತರ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ ಸಹಸ್ರಾರು ಕಾರ್ಯಕರ್ತರು ಸಕ್ರೀಯರಾಗಿ ಭಾಗವಹಿಸಿ ಯಶಸ್ವಿ ಗೊಳಿಸಿದ್ದಾರೆ. ಜನರಲ್ಲಿ ಬದಲಾವಣೆಯ ಗಾಳಿ ಬೀಸತೊಡಗಿದೆ. ಆದ್ದರಿಂದ ಆದಷ್ಟು ಶೀಘ್ರ ಪಕ್ಷದ ಬೂತ್ ಮಟ್ಟದ ಅಧಿಕಾರಿ (ಬಿಎಲ್ಎ)ಗಳ ನೇಮಕಾತಿ ನಡೆಯಬೇಕಂದರು.ಉಡುಪಿ ಜಿಲ್ಲಾ ಬಿಎಲ್ಎ 2 ಉಸ್ತುವಾರಿಗಳಾದ ವೆರೋನಿಕಾ ಕರ್ನೆಲಿಯೋ ಮಾತನಾಡಿ, ಕ್ರೀಯಾಶೀಲರಲ್ಲದ ಬಿಎಲ್ಎ 2 ಅವರನ್ನು ಬದಲಾಯಿಸುವ ಅವಕಾಶವಿದೆ. ಫೆ.27ರಂದು ಬಿಎಲ್ಎ 2 ಗಳ ಸಮಾವೇಶ ನಡೆಯಲಿದೆ ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಪೂರ್, ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಮುಖಂಡರಾದ ನೀರೆ ಕೃಷ್ಣ ಶೆಟ್ಟಿˌ ಪ್ರಸಾದ್ ರಾಜ್ ಕಾಂಚನ್ˌ ದಿನೇಶ್ ಹೆಗ್ಡೆ ಮುಳವಳ್ಳಿˌ ದಿನೇಶ್ ಪುತ್ರನ್, ಹರೀಶ್ ಕಿಣಿˌ ಭಾಸ್ಕರ್ ರಾವ್ ಕಿದಿಯೂರುˌ ಅಣ್ಣಯ್ಯ ಸೇರಿಗಾರ್ˌ ಬ್ಲಾಕ್ ಅಧ್ಯಕ್ಷರುಗಳಾದ ಹರಿಪ್ರಸಾದ್ ಶೆಟ್ಟಿ ಕುಂದಾಪುರˌ ಶಂಕರ್ ಕುಂದರ್ ಕೋಟˌ ಪ್ರದೀಪ್ ಕುಮಾರ್ ಶೆಟ್ಟಿ ವಂಡ್ಸೆˌ ಅರವಿಂದ್ ಪೂಜಾರಿ ಬೈಂದೂರುˌ ರಮೇಶ್ ಕಾಂಚನ್ ಉಡುಪಿˌ ನವೀನ್ ಚಂದ್ರ ಸುವರ್ಣ ಕಾಪು, ಸಂತೋಷ ಕುಲಾಲ್ ಕಾಪು ಉತ್ತರˌ ಚಂದ್ರಶೇಖರ್ ಬಾಯರಿ ಹೆಬ್ರಿˌ ದಿನಕರ ಹೇರೂರು ಬ್ರಹ್ಮಾವರˌ ಸದಾಶಿವ ದೇವಾಡಿಗ ಕಾರ್ಕಳ ಮತ್ತಿತರರು ಉಪಸ್ಥಿತರಿದ್ದರು.