ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಮಂಗಳವಾರ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ, ಎನುಮರೇಷನ್ ಫಾರ್ಮ್ ಅನ್ನು ವಿತರಿಸಿ, ಮತದಾರರ ವಿವರವನ್ನು ಕಲೆ ಹಾಕಲಾರಾಂಭಿಸಿದ್ದಾರೆ.

ಉಡುಪಿ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಮಂಗಳವಾರ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲ ಮತಗಟ್ಟೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ, ಎನುಮರೇಷನ್ ಫಾರ್ಮ್ ಅನ್ನು ವಿತರಿಸಿ, ಮತದಾರರ ವಿವರವನ್ನು ಕಲೆ ಹಾಕಲಾರಾಂಭಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಅವರು ಉಡುಪಿ ನಗರದ ಇಂದ್ರಾಳಿ, ಕುಂಜಿಬೆಟ್ಟು, ಕಾಡಬೆಟ್ಟು, ಪಣಿಯಾಡಿ ಸೇರಿದಂತೆ ಮತ್ತಿತರ ವಾರ್ಡ್ಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಂಗಳವಾರದಿಂದ ಜುಲೈ 29 ರ ವರೆಗೆ ಮನೆಮನೆ ಸಮೀಕ್ಷೆ ನಡೆಸಿ, ಎನುಮರೇಷನ್ ಫಾರಂಗಳನ್ನು ನೀಡಿ, ಸಾರ್ವಜನಿಕರಿಂದ ಭರ್ತಿ ಮಾಡಲಾದ ಗಣತಿ ನಮೂನೆಗಳನ್ನು ಭಾವಚಿತ್ರ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಪಡೆಯಲಿದ್ದಾರೆ. ಸಾರ್ವಜನಿಕರು ಈ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಡಿಸಿ ಮನವಿ ಮಾಡಿದ್ದಾರೆ

ಆ 5 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು. ಇದರ ಬಗ್ಗೆ ಹಕ್ಕು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಆಗಸ್ಟ್ 5 ರಿಂದ ಸೆಪ್ಟೆಂಬರ್ 4 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇವುಗಳ ವಿಲೇವಾರಿಯನ್ನು ಆಗಸ್ಟ್ 5 ರಿಂದ ಅಕ್ಟೋಬರ್ 3 ರ ವರೆಗೆ ನಡೆಸಿ, ಅಕ್ಟೋಬರ್ 7 ಕ್ಕೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿ ಎನುಮರೇಷನ್ ಅರ್ಜಿಯನ್ನು ನೀಡಿದರು. ಅದೇ ರೀತಿ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಮೌಲ ಹಾಗೂ ಕೆಲವು ಹಿರಿಯ ನಾಗರಿಕರನ್ನು ಡಿಸಿ ಅವರು ಭೇಟಿಯಾಗಿ ಎನುಮರೇಷನ್ ಅರ್ಜಿಗಳನ್ನು ಹಸ್ತಾಂತರಿಸಿದರು

ಈ ಸಂದರ್ಭದಲ್ಲಿ ಉಡುಪಿ ತಾಲೂಕು ತಹಸೀಲ್ದಾರ್ ಗುರುರಾಜ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.