ಸಾರಾಂಶ
ಉಡುಪಿ: ಜಿಲ್ಲಾಡಳಿತದ ವತಿಯಿಂದ ದೊಡ್ಡಣಗುಡ್ಡೆಯ ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆ (ಡಾ. ಎ.ವಿ ಬಾಳಿಗಾ ಚಾರಿಟೀಸ್)ಯ ಸಹಯೋಗದಲ್ಲಿ ನಡೆಸುವ ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರವನ್ನು ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಮಣಿಪಾಲ ಕೆ.ಎಂ.ಸಿ.ಯ ಮನೋರೋಗ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ.ಎಸ್.ವಿ.ಎನ್ ಶರ್ಮಾ ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಈ ಕೇಂದ್ರವು 10 ಹಾಸಿಗೆಗಳನ್ನು ಹೊಂದಿದ್ದು, ಮಾನಸಿಕ ಅಸ್ವಸ್ಥರಿಗೆ ಮತ್ತು ನಿರಾಶ್ರಿತರಿಗೆ ಆಸ್ಪತ್ರೆ ಆಧಾರಿತ ಬಹು ಶಿಸ್ತಿನ ಸೇವೆಗಳನ್ನು ಒದಗಿಸುವುದು ಈ ಕೇಂದ್ರದ ಉದ್ದೇಶ ಎಂದರು.ಜಿಲ್ಲಾ ಸರ್ಜನ್ ಡಾ.ಅಶೋಕ್ ಎಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ. ಬಸವರಾಜ ಜಿ.ಹುಬ್ಬಳ್ಳಿ, ನಿವಾಸಿ ವೈದ್ಯಾಧಿಕಾರಿ ಡಾ. ವಾಸುದೇವ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಲತಾ ನಾಯಕ್, ಡಾ. ಎ.ವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ.ವಿ. ಭಂಡಾರಿ ಹಾಗೂ ಸಮಾಜಸೇವಕರಾದ ನಿತ್ಯಾನಂದ ಒಳಕಾಡು ಮತ್ತು ವಿಶು ಶೆಟ್ಟಿ ಅಂಬಲಪಾಡಿ ಮತ್ತಿತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))