ಸಾರಾಂಶ
ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಶಾಸ್ತ್ರ ವಿಭಾಗದ ಪ್ಲೇಸ್‌ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಹಾಗೂ ಬೆಂಗಳೂರಿನ ಮಹಾಲೇಖಪಾಲರ ಕಚೇರಿ ಆಶ್ರಯದಲ್ಲಿ ‘ಪ್ರೇರಣಾʼ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕನ್ನಡಪ್ರಭ ವಾರ್ತೆ ಉಡುಪಿ
ನಗರದ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾಣಿಜ್ಯ ಶಾಸ್ತ್ರ ವಿಭಾಗದ ಪ್ಲೇಸ್‌ಮೆಂಟ್ ಸೆಲ್ ಮತ್ತು ಐಕ್ಯೂಎಸಿ ಹಾಗೂ ಬೆಂಗಳೂರಿನ ಮಹಾಲೇಖಪಾಲರ ಕಚೇರಿ ಆಶ್ರಯದಲ್ಲಿ ‘ಪ್ರೇರಣಾʼ ಎಂಬ ಕಾರ್ಯಕ್ರಮ ಆಯೋಜಿಸಲಾಗಿತ್ತು.ಈ ಸರ್ಕಾರಿ ಪ್ರಾಯೋಜಿತ ಕಾರ್ಯಕ್ರಮದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಲೆಕ್ಕ ಪರಿಶೋಧನಾ ಉದ್ಯೋಗ ಅವಕಾಶಗಳು ಮತ್ತು ಅವುಗಳಿಗೆ ಅಗತ್ಯ ಶಿಕ್ಷಣ- ತರಬೇತಿಯ ಬಗ್ಗೆ ಮಾಹಿತಿಯನ್ನು ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಧರ್ ಪ್ರಸಾದ್ ವಹಿಸಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಮಹಾಲೇಖಪಾಲರ ಕಚೇರಿಯ ಅಧಿಕಾರಿ ಶ್ಯಾಮ್‌ಸುಂದರ್ ಕೆ., ಹಿರಿಯ ಲೆಕ್ಕಪರಿಶೋಧನಾಧಿಕಾರಿಗಳಾದ ಶ್ರೀಧರ್ ರೆಡ್ಡಿ ಸಿ.ಎನ್., ಕೆ.ಎಸ್. ಜಗದೀಶ್, ರಾಜ್‌ಕುಮಾರ್ ಸಿಂಗ್, ಸರ್ಕಾರಿ ಇಲಾಖೆಗಳ ಖರ್ಚು ವೆಚ್ಚಗಳ ಲೆಕ್ಕಪರಿಶೋಧನೆ ಇದರ ಪ್ರಾಮುಖ್ಯತೆ ಮತ್ತು ಸರ್ಕಾರಿ ಇಲಾಖೆಗಳಲ್ಲಿ ಉದ್ಯೋಗಾವಕಾಶಗಳ ಮಾಹಿತಿ ನೀಡಿದರು. ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ಅಧಿಕಾರಿ ಮತ್ತು ಸಹ ಪ್ರಾಧ್ಯಾಪಕ ಡಾ. ಉಮೇಶ್ ಮಯ್ಯ ಕಾರ್ಯಕ್ರಮ ಸಂಯೋಜಿಸಿದ್ದರು. ಸಹ ಪ್ರಾಧ್ಯಾಪಕ ಕೃಷ್ಣಭಟ್ ಪ್ರಾಸ್ತಾವಿಕ ಭಾಷಣ ಮಾಡಿದರು. ಅಂತಿಮ ತರಗತಿ ವಿದ್ಯಾರ್ಥಿಗಳಾದ ಮಾನಸ ಪ್ರಾರ್ಥಿಸಿದರು. ಶ್ರಾವ್ಯ ಕಾರ್ಯಕ್ರಮ ನಿರೂಪಿಸಿದರು. ಶಮಿತಾ ಸ್ವಾಗತಿಸಿದರು. ಶ್ರೀದೇವಿ ವಾರಂಬಳ್ಳಿ ವಂದಿಸಿದರು.