ಅವರು ಉಡುಪಿ ಸಿವಿಲ್‌ ಎಂಜಿನಿಯರ್ಸ್‌ ಅಸೋಸಿಯೇಶನ್‌ ವತಿಯಿಂದ ಬುಧವಾರ ನಡೆದ ಎಂಜಿನಿಯರ್ಸ್‌ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡುತಿದ್ದರು.

ಉಡುಪಿ: ಎಂಜಿನಿಯರ್‌ಗಳು ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವ ಜವಾಬ್ದಾರಿಯಾಗಿ ಸ್ವೀಕರಿಸಬೇಕು. ವೃತ್ತಿಯಲ್ಲಿ ಹೊಸ ತಂತ್ರಜ್ಞಾನಗಳನ್ನು ತಿಳಿದು ಗುಣಮಟ್ಟಕ್ಕೆ ಆದ್ಯತೆ ನೀಡಬೇಕು, ಆಗ ವೃತ್ತಿಪರ ಪ್ರಗತಿಯೊಂದಿಗೆ ಸಮಾಜಕ್ಕೂ ಹೆಚ್ಚಿನ ಪ್ರಯೋಜನವಾಗುತ್ತದೆ ಎಂದು ಎಂಐಟಿಯ ಪ್ರಾಧ್ಯಾಪಕ ಡಾ. ರಾಘವೇಂದ್ರ ಕೆ. ಹೊಳ್ಳ ಅಭಿಪ್ರಾಯಪಟ್ಟರು.

ಅವರು ಉಡುಪಿ ಸಿವಿಲ್‌ ಎಂಜಿನಿಯರ್ಸ್‌ ಅಸೋಸಿಯೇಶನ್‌ ವತಿಯಿಂದ ಬುಧವಾರ ನಡೆದ ಎಂಜಿನಿಯರ್ಸ್‌ ಡೇ ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡುತಿದ್ದರು.

ಮುಖ್ಯ ಅತಿಥಿ ಮೆಸ್ಕಾಂ ಉಡುಪಿ ಉಪವಿಭಾಗದ ಎಇಇ ಎಸ್‌. ಗಣರಾಜ ಭಟ್‌, ಎಂಜಿನಿಯರ್‌ಗಳು ವೃತ್ತಿ ಜೀವನದಲ್ಲಿ ನಿರಂತರವಾಗಿ ಕಲಿಯುವ ಮನೋಭಾವ ಬೆಳೆಸಿಕೊಂಡು, ಗುಣಮಟ್ಟದ ಹಾಗೂ ಸಮಾಜಕ್ಕೆ ಉಪಯುಕ್ತ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಸರ್ ಎಂ.ವಿಶ್ವೇಶ್ವರಯ್ಯ ಅವರ ಕುರಿತು ಎಂಜಿನಿಯರ್ ಪಟ್ಟಾಭಿರಾಮ್ ಆಚಾರ್ಯ ಮಾತನಾಡಿದರು. ಕೋಶಾಧಿಕಾರಿ ಗಣೇಶ್‌ ಎಸ್. ಸಾಲ್ಯಾನ್‌, ಉಪಾಧ್ಯಕ್ಷ ಭರತ್ ಭೂಷಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಕೆ. ರಂಜನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಅವಿನಾಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಕೆ. ಹರೀಶ್‌ ಕುಮಾರ್‌ ವಂದಿಸಿದರು. ಇದೇ ಸಂದರ್ಭದಲ್ಲಿ ವಿಶ್ವದಾಖಲೆಯ ವಿದುಷಿ ಸಂಗೀತಾ ಬಾಲಚಂದ್ರ, ನೃತ್ಯ ಕಲಾವಿದೆ ವಿದುಷಿ ದೀಕ್ಷಾ ರಾಮಕೃಷ್ಣ, ಸಾಮಾಜಿಕ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು ಮತ್ತು ಈಶ್ವರ ಮಲ್ಪೆ ಅವರನ್ನು ಸನ್ಮಾನಿಸಲಾಯಿತು. ಪ್ರತಿಭಾನ್ವಿತ ಎಂಜಿನಿಯರಿಂಗ್ ವಿದ್ಯಾರ್ಥಿಗೆ ವಿದ್ಯಾರ್ಥಿವೇತನ ನೀಡಿ ಪ್ರೋತ್ಸಾಹಿಲಾಯಿತು.