ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿ
ಅರಣ್ಯ ಹುತಾತ್ಮರ ದಿನಾಚರಣೆಯ ಪ್ರಯುಕ್ತ ಗುರುವಾರ ಉಪವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಗಸ್ತು ಅರಣ್ಯ ಪಾಲಕರ ಸಂಘಗಳ ವತಿಯಿಂದ ರಕ್ತದಾನ ಶಿಬಿರ ಉಡುಪಿಯಲ್ಲಿ ನಡೆಯಿತು. ಉಡುಪಿ ಶಾಸಕ ಯಶಪಾಲ್ ಸುವರ್ಣ ಉದ್ಘಾಟಿಸಿದರು.ಉಪವಲಯ ಅರಣ್ಯಾಧಿಕಾರಿಗಳ ಸಂಘದ ಅಧ್ಯಕ್ಷ ನಾಗೇಶ್ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ., ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಮ್ ಬಾಬು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಜಿಲ್ಲಾ ರಕ್ತನಿಧಿ ಕೇಂದ್ರದ ಡಾ.ವೀಣಾ ಶೆಟ್ಟಿ, ಗಸ್ತು ಅರಣ್ಯ ಪಾಲಕ ಸಂಘದ ಗೌರವಾಧ್ಯಕ್ಷ ದೇವರಾಜ ಪಾಣ , ಐಎಂಎ ಸಂಘದ ಅಧ್ಯಕ್ಷ ಡಾ. ಕಲ್ಯಾ ಸುರೇಶ್ ಶೆಣೈ, ಮೂಡುಬಿದಿರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್, ಕುಂದಾಪುರ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ, ಸಿದ್ದಾಪುರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ ಜಿ. ಡಿ., ಕರ್ನಾಟಕ ರಾಜ್ಯ ವಲಯ ಅರಣ್ಯಾಧಿಕಾರಿ ಸಂಘದ ಕಾರ್ಯದರ್ಶಿ ಕಿರಣ್ ಕುಮಾರ್ ಇದ್ದರು.ಗಸ್ತು ಅರಣ್ಯ ಪಾಲಕರ ಸಂಘದ ಅಧ್ಯಕ್ಷ ಕೇಶವ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಉಪವಲಯ ಅರಣ್ಯಾಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಸ್ವಾಗತಿಸಿದರು. ಗಸ್ತು ಅರಣ್ಯ ಪಾಲಕರ ಸಂಘದ ಖಜಾಂಚಿ ಧನ್ಯವಾದ ಸಮರ್ಪಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಕಾರ್ಯಕ್ರಮ ನಿರೂಪಿಸಿದರು ಅರಣ್ಯ ರಕ್ಷಣೆಯಲ್ಲಿ ಮಡಿದ ಹುತಾತ್ಮರಿಗೆ ಗೌರವ ನಮನ ಸಲ್ಲಿಸಲಾಯಿತು. ಒಟ್ಟು 155 ಯೂನಿಟ್ ರಕ್ತ ಸಂಗ್ರಹಿಸಿ ಜಿಲ್ಲಾ ರಕ್ತನಿಧಿ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು.